ಚಿಕ್ಕಬಳ್ಳಾಪುರ: ತಾಲ್ಲೂಕಿನ ಆವುಲಬೆಟ್ಟದ ವ್ಯೂ ಪಾಯಿಂಟ್‌ನಲ್ಲಿ ರೀಲ್ಸ್ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಆತನಿಂದಲೇ ವಿಡಿಯೊ ಮಾಡಿಸಿ ಇನ್ನು ಮುಂದೆ ಯಾರೂ ಈ ರೀತಿಯಲ್ಲಿ ಹುಚ್ಚಾಟದ ಸಾಹಸಗಳನ್ನು ಮಾಡಬಾರದು ಎಂದು ಕಿವಿಮಾತು ಹೇಳಿಸಿದ್ದಾರೆ.
ಅಕ್ಷಯ್ ಕುಮಾರ್ ಎಂಬಾತ ವ್ಯೂ ಪಾಯಿಂಟ್‌ನ ಅಪಾಯಕಾರಿ ಸ್ಥಳದಲ್ಲಿ ರೀಲ್ಸ್ ಮಾಡಿದ್ದ. ಇದನ್ನು ತನ್ನ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ.
ವ್ಯೂಪಾಯಿಂಟ್ ಸ್ಥಳದಲ್ಲಿ ಹೀಗೆ ರೀಲ್ಸ್ ಮಾಡುವವರ ಹುಚ್ಚಾಟಗಳು ಆಗಾಗ್ಗೆ ವರದಿ ಆಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ವ್ಯೂಪಾಯಿಂಟ್ ಹಾದಿಯಲ್ಲಿ ತಡೆಗೋಡೆ ನಿರ್ಮಿಸಿದ್ದಾರೆ.
‘ಪ್ರವಾಸಿ ತಾಣಗಳಲ್ಲಿ ಹೀಗೆ ಅಪಾಯಕಾರಿಯಾದ ರೀತಿಯಲ್ಲಿ ರೀಲ್ಸ್ ಮಾಡುವುದು ಸರಿಯಲ್ಲ. ಇಂತಹ ಪ್ರಕರಣಗಳು ಕಂಡು ಬಂದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ಪ್ರಕರಣ ದಾಖಲಿಸಲಾಗುತ್ತದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.