ಚಿಂತಾಮಣಿ: ಶ್ರೀಗಂಧದ ಮರದ ತುಂಡುಗಳನ್ನು ಕಳವು ಮಾಡಿ ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕೆಂಚಾರ್ಲಹಳ್ಳಿ ಪೊಲೀಸರು ತಾಲ್ಲೂಕಿನ ಬುರುಡಗುಂಟೆಯಲ್ಲಿ ಶನಿವಾರ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.
ಬುರುಡಗುಂಟೆ ಮೌಲಾ ಮತ್ತು ಬಾಬಾ ಬಂಧಿತ ಆರೋಪಿಗಳು. ಗುಂಡಾ ವೆಂಕಟರಮಣ ಪರಾರಿಯಾಗಿರುವ ಆರೋಪಿ.
ಆರೋಪಿಗಳು ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ಇಟ್ಟುಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಕೆಂಚಾರ್ಲಹಳ್ಳಿ ಠಾಣೆ ಸಬ್ ಇನ್ ಸ್ಪೆಕ್ಟರ್ ಶಿವಕುಮಾರ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ.
ಪ್ಲಾಸ್ಟಿಕ್ ಚೀಲದಲ್ಲಿದ್ದ 14ಕೆ.ಜಿ ತೂಕದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಬೆಲೆ ₹1.20ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.
ಡಿವೈಎಸ್ಪಿ ಮುರಳಿಧರ್ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಲೋಕೇಶ್, ರವಿಕುಮಾರ್, ಶಶಿಕುಮಾರ್, ವೆಂಕಟೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.