ADVERTISEMENT

ಶಿಡ್ಲಘಟ್ಟ: ₹1.6 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2024, 14:29 IST
Last Updated 27 ಜನವರಿ 2024, 14:29 IST
ಶಿಡ್ಲಘಟ್ಟ ತಾಲ್ಲೂಕು ಬಶೆಟ್ಟಹಳ್ಳಿ ಹೋಬಳಿಯ ಅಮ್ಮಗಾರಹಳ್ಳಿ ರಸ್ತೆ ಅಭಿವೃದ್ಧಿಗೆ ಶಾಸಕ ಬಿ.ಎನ್.ರವಿಕುಮಾರ್ ಚಾಲನೆ ನೀಡಿದರು
ಶಿಡ್ಲಘಟ್ಟ ತಾಲ್ಲೂಕು ಬಶೆಟ್ಟಹಳ್ಳಿ ಹೋಬಳಿಯ ಅಮ್ಮಗಾರಹಳ್ಳಿ ರಸ್ತೆ ಅಭಿವೃದ್ಧಿಗೆ ಶಾಸಕ ಬಿ.ಎನ್.ರವಿಕುಮಾರ್ ಚಾಲನೆ ನೀಡಿದರು   

ಶಿಡ್ಲಘಟ್ಟ: ಗ್ರಾಮಗಳಲ್ಲಿ ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ ನೈರ್ಮಲ್ಯದಂತ ಮೂಲ ಸೌಕರ್ಯಗಳ ಜತೆಗೆ ಎಲ್ಲರಿಗೂ ಉತ್ತಮ ಶಿಕ್ಷಣ ಆರೋಗ್ಯ ನೀಡುವುದು ಸರ್ಕಾರದ ಹೊಣೆ ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ₹1.6 ಕೋಟಿ ಅನುದಾನದಲ್ಲಿ ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿಯ ದಿಬ್ಬೂರಹಳ್ಳಿ ಮುಖ್ಯರಸ್ತೆಯಿಂದ ಅಮ್ಮಗಾರಹಳ್ಳಿ ಗ್ರಾಮದವರೆಗೆ ನಡೆಯುತ್ತಿರುವ 2 ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ಕಾಮಗಾರಿ ನಡೆಯುತ್ತಿರುವಾಗ ಸ್ಥಳೀಯರು ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಗುಣಮಟ್ಟದ ಕೊರತೆ ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

ADVERTISEMENT

ದ್ಯಾವರಹಳ್ಳಿಯಿಂದ ಕರಿಬೆಟ್ಟದ ಚೌಡೇಶ್ವರಿ ದೇವಾಲಯಕ್ಕೆ ತೆರಳುವ ರಸ್ತೆ ಅಭಿವೃದ್ಧಿ ಮಾಡಿಕೊಡುವಂತೆ ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.

ಬಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಬಿ.ವೆಂಕಟೇಶ್, ಉಪಾಧ್ಯಕ್ಷೆ ಲಕ್ಷ್ಮಿದೇವಮ್ಮ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಡಿ.ಸಿ.ರಾಮಚಂದ್ರ, ಬಿ.ವಿ.ನಾರಾಯಣಸ್ವಾಮಿ, ಬಂಕ್ ಮುನಿಯಪ್ಪ, ತಾದೂರು ರಘು, ಧನಂಜಯರೆಡ್ಡಿ, ದ್ಯಾವರಹಳ್ಳಿ ಧರ್ಮೇಂದ್ರ, ಸುರೇಶ್, ಬಿ.ಕೆ.ದ್ಯಾವಪ್ಪ, ಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.