ಶಿಡ್ಲಘಟ್ಟ: ಶಿಡ್ಲಘಟ್ಟ–ಬೆಂಗಳೂರು ರಸ್ತೆಯ ಚೌಡಸಂದ್ರ ಗೇಟ್ ಬಳಿ ಬುಧವಾರ ಮುಂಜಾನೆ ನಿಂತಿದ್ದ ಖಾಸಗಿ ಬಸ್ಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಮುಂಜಾನೆ ದಟ್ಟ ಮಂಜು ಆವರಿಸಿದ್ದರಿಂದಾಗಿ ರಸ್ತೆಯಲ್ಲಿರುವ ವಾಹನಗಳು ಸ್ಪಷ್ಟವಾಗಿ ಕಾಣಿಸುತ್ತಿರಲಿಲ್ಲ. ಆಗ ಶಿಡ್ಲಘಟ್ಟದಿಂದ ವೇಗವಾಗಿ ಬರುತ್ತಿದ್ದ ಕಾರು, ರಸ್ತೆ ಬದಿಯಲ್ಲಿ ನಿಂತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು, ಏರ್ಬ್ಯಾಗ್ಗಳು ಸರಿಯಾಗಿ ಕಾರ್ಯನಿರ್ವಹಿಸಿದ್ದರಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.