ಗೌರಿಬಿದನೂರು: ಸುತ್ತಮುತ್ತಲ ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ ಎಂದು ವಾಟದಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನಿತಾ ಮಹೇಶ್ ಹೇಳಿದರು.
ಸ್ವಚ್ಛ ಹೀ ಸೇವಾ ಸಪ್ತಾಹದ ಅಂಗವಾಗಿ ಯಲಹಂಕ ಉಪನಗರ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕವು, ಎನ್ಎಸ್ಎಸ್ ಪ್ರಾದೇಶಿಕ ಕೇಂದ್ರ, ಯುವ ಸಬಲೀಕರಣ ಇಲಾಖೆ, ಭಾರತ ಸರ್ಕಾರ, ರಾಜ್ಯ ಎನ್ಎಸ್ಎಸ್ ಕೋಶ, ಬೆಂಗಳೂರು ನಗರ ವಿಶ್ವವಿದ್ಯಾಲಯ ಮತ್ತು ವಾಟದಹೊಸಹಳ್ಳಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ವಾಟದಹೊಸಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೃಷ್ಣದೇವರಾಯ ಆಳ್ವಿಕೆಯಲ್ಲಿ ನಿರ್ಮಿಸಲಾಗಿದ್ದ ಚನ್ನರಾಯಸ್ವಾಮಿ ದೇವಾಲಯ ಮತ್ತು ಕಲ್ಯಾಣಿ ಅನಾಥವಾಗಿತ್ತು. ಯಲಹಂಕ ಉಪನಗರದ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕರು ದೇವಾಲಯ ಮತ್ತು ಕಲ್ಯಾಣಿಯಲ್ಲಿ ಬೆಳೆದಿದ್ದ ಗಿಡಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿ ಕಲ್ಯಾಣಿಗೆ ಮರುಜೀವ ನೀಡಿರುವುದು ಸಂತಸವಾಗಿದೆ ಎಂದರು.
ಎನ್ಎಸ್ಎಸ್ ಅಧಿಕಾರಿ ನವೀನ್ ಕುಮಾರ್ ಕೆ.ಎಸ್, ಶ್ರೀನಿವಾಸ್, ಬಂಡಪಲ್ಲಿ ಮೂರ್ತಿ, ಕೃಷ್ಣಮೂರ್ತಿ, ಮೋಹನ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.