ADVERTISEMENT

ವರ್ಷಾಂತ್ಯಕ್ಕೆ ಗೌರಿಬಿದನೂರು ತಾಲ್ಲೂಕಿನ ಕೆರೆಗಳಿಗೆ ನೀರು: ವೀರಪ್ಪ ಮೊಯಿಲಿ

​ಪ್ರಜಾವಾಣಿ ವಾರ್ತೆ
Published 7 ಜುಲೈ 2023, 13:30 IST
Last Updated 7 ಜುಲೈ 2023, 13:30 IST
ಗೌರಿಬಿದನೂರು ‌ನಗರದ ಪ್ರವಾಸಿ‌ಮಂದಿರಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಎಂ.ವೀರಪ್ಪ ಮೊಯಿಲಿ, ಮಾಜಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಹಾಗೂ ಪಕ್ಷದ ಕಾರ್ಯಕರ್ತರು
ಗೌರಿಬಿದನೂರು ‌ನಗರದ ಪ್ರವಾಸಿ‌ಮಂದಿರಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಎಂ.ವೀರಪ್ಪ ಮೊಯಿಲಿ, ಮಾಜಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಹಾಗೂ ಪಕ್ಷದ ಕಾರ್ಯಕರ್ತರು   

ಗೌರಿಬಿದನೂರು: ಎತ್ತಿನಹೊಳೆ ಕಾಮಗಾರಿಯು ಪ್ರಗತಿಯಲ್ಲಿದ್ದು, ಈ ವರ್ಷದ ಅಂತ್ಯಕ್ಕೆ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಯಲಿದೆ ಎಂದು ಮಾಜಿ ಸಂಸದ ವೀರಪ್ಪ ಮೊಯಿಲಿ ಭರವಸೆ ನೀಡಿದ್ದಾರೆ. 

ಇತ್ತೀಚೆಗೆ ಇಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರವು ಅನುದಾನ ಬಿಡುಗಡೆಗೆ ವಿಳಂಬ ನೀತಿ ಅನುಸರಿಸಿದ ಕಾರಣ ಎತ್ತಿನಹೊಳೆ ಕಾಮಗಾರಿ ವಿಳಂಬವಾಗಿತ್ತು. ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕಾಮಗಾರಿಗೆ ಚುರುಕು‌ ನೀಡಿದ್ದು, ಅನುಷ್ಠಾನಕ್ಕೆ ಬದ್ಧವಾಗಿದೆ’ ಎಂದು ತಿಳಿಸಿದರು. 

ಗೌರಿಬಿದನೂರು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋತಿರಬಹುದು. ಆದರೆ ಕಾರ್ಯಕರ್ತರಲ್ಲಿನ ಉತ್ಸಾಹ ಮತ್ತು ಆತ್ಮಸ್ಥೈರ್ಯ ಕುಂದಿಲ್ಲ. ಪಕ್ಷದಲ್ಲಿ ಹೊಸ ನಾಯಕರನ್ನು ಗುರುತಿಸಿ, ಬೆಳೆಸುವ ಸಾಮರ್ಥ್ಯ ಶಿವಶಂಕರರೆಡ್ಡಿ ಅವರಿಗೆ ಇದೆ. ಅವರು ಪಕ್ಷದ ಆಸ್ತಿಯಾಗಿದ್ದು, ಅವರಿಗೆ ಸರ್ಕಾರ ಮುಂದಿನ ದಿನಗಳಲ್ಲಿ ಸ್ಥಾನಮಾನ ನೀಡಲಿದೆ ಎಂದರು. 

ADVERTISEMENT

ಮಾಜಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಮಾತನಾಡಿ, ಪ್ರತಿಯೊಂದು ಹೋಬಳಿ ಮಟ್ಟದಲ್ಲೂ ಕಾರ್ಯಕರ್ತರು ಹಾಗೂ ಮುಖಂಡರ ಸಭೆ ಹಮ್ಮಿಕೊಂಡು ಪಕ್ಷ ಸಂಘಟನೆ ಮಾಡಲಾಗುವುದು ಎಂದು ತಿಳಿಸಿದರು. 

ಡಿಸಿಸಿ ಬ್ಯಾಂಕ್ ನಿರ್ದೇಶಕ ಮರಳೂರು ಹನುಮಂತರೆಡ್ಡಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಪಿ.ಅಶ್ವತ್ಥನಾರಾಯಣ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಇ.ಮಂಜುನಾಥ್, ನಗರಸಭಾ ಸದಸ್ಯರಾದ ರಮೇಶ್, ಆರ್.ಪಿ.ಗೋಪಿನಾಥ್, ಎಂ.ಎನ್.ರಾಧಾಕೃಷ್ಣ, ಎಚ್.ಎನ್.ಪ್ರಕಾಶ್ ರೆಡ್ಡಿ, ಗಿರೀಶ್‌ ರೆಡ್ಡಿ, ಗಂಗಾಧರಪ್ಪ, ಸಿ.ಜಿ.ಗಂಗಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

ಗೌರಿಬಿದನೂರು ‌ನಗರದ ಪ್ರವಾಸಿ‌ಮಂದಿರಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಎಂ.ವೀರಪ್ಪ ಮೊಯಿಲಿ ಮಾಜಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಹಾಗೂ ಪಕ್ಷದ ಕಾರ್ಯಕರ್ತರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.