ADVERTISEMENT

ವಿಶ್ವ ಪ್ರವಾಸೋದ್ಯಮ ದಿನಾಚರಣೆ: ನಂದಿ ಗಿರಿಧಾಮದಲ್ಲಿ ಸ್ವಚ್ಛತಾ ಅಭಿಯಾನ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2024, 15:54 IST
Last Updated 27 ಸೆಪ್ಟೆಂಬರ್ 2024, 15:54 IST
ವಿಶ್ವ ಪ್ರವಾಸೋದ್ಯಮ ದಿನಾಚರಣೆ  ಪ್ರಯುಕ್ತ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗಿರಿಧಾಮದಲ್ಲಿ ಸ್ವಚ್ಛತಾ ಆಂದೋಲನ ನಡೆಯಿತು
ವಿಶ್ವ ಪ್ರವಾಸೋದ್ಯಮ ದಿನಾಚರಣೆ  ಪ್ರಯುಕ್ತ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗಿರಿಧಾಮದಲ್ಲಿ ಸ್ವಚ್ಛತಾ ಆಂದೋಲನ ನಡೆಯಿತು   

ಚಿಕ್ಕಬಳ್ಳಾಪುರ: ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಪ್ರಯುಕ್ತ ‘ಹಸಿರು- ಸ್ವಚ್ಛ ಚಿಕ್ಕಬಳ್ಳಾಪುರ ಮತ್ತು ಪ್ಲಾಸ್ಟಿಕ್ ಮುಕ್ತ ಚಿಕ್ಕಬಳ್ಳಾಪುರ’ಕ್ಕೆ ಜಿಲ್ಲಾಡಳಿತ ಸಂಕಲ್ಪ ಮಾಡಿದ್ದು ಜಿಲ್ಲೆಯ ನಾಗರಿಕರು ಮತ್ತು ಪ್ರವಾಸಿಗರು ಸಹಕರಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಬಿ.ಟಿ ಯಶವಂತ್ ಕುಮಾರ್  ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಶುಕ್ರವಾರ ವಿಶ್ವ ಪ್ರವಾಸೋದ್ಯಮ ದಿನಾಚರಣೆ  ಪ್ರಯುಕ್ತ ನಂದಿ ಗಿರಿಧಾಮದಲ್ಲಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 

ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಪ್ರವಾಸಿಗರಿಗೆ ನಂದಿ ಗಿರಿಧಾಮದಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ” ಕಾರ್ಯಕ್ರಮ ಆಚರಿಸಿದ್ದೇವೆ. ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಬರುವಾಗ ಪ್ರವಾಸಿ ತಾಣಗಳ ನಿಯಮಗಳು ಹಾಗೂ ನಿಬಂಧನೆಗಳನ್ನು ಪಾಲಿಸಬೇಕು ಎಂದರು.

ADVERTISEMENT

ಪ್ಲಾಸ್ಟಿಕ್ ಯುಕ್ತ ವಸ್ತುಗಳನ್ನು ಬಳಸಬಾರದು. ರಾಜ್ಯದಲ್ಲಿ ನಂದಿ ಗಿರಿಧಾಮವು  ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರವಾಸಿಗರು ಯಾವುದೇ ಅವಘಡಗಳಿಗೆ ಅವಕಾಶ ನೀಡದೆ ವೀಕ್ಷಣಾ ಕಾರ್ಯಗಳಲ್ಲಿ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಈಶ್ವರಪ್ಪ ಮಾತನಾಡಿ, ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ನಂದಿ ಗಿರಿಧಾಮದಲ್ಲಿ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪ್ರವಾಸಿಗರು ಮತ್ತು ಸಾರ್ವಜನಿಕರು ಈ ಕಾರ್ಯಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ ಜೊತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಕಲಾತಂಡಗಳು ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕಲೆಗಳನ್ನು ಪ್ರದರ್ಶಿಸಿದರು. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಘೋಷ ವಾಕ್ಯವಾದ ‘ಪ್ರವಾಸೋದ್ಯಮ ಮತ್ತು ಶಾಂತಿ’ಯ ಬಗ್ಗೆ ಅಧಿಕಾರಿಗಳು ತಿಳಿಸಿದರು. ಪ್ರತಿಜ್ಞಾವಿಧಿ ಬೋಧಿಸಿದರು. ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಜಿಲ್ಲಾ ಆರೋಗ್ಯಾ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಎಸ್. ಮಹೇಶ್ ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನಗರ ಸಭೆ ಪೌರಾಯುಕ್ತರು, ಪ್ರವಾಸಿಗರು, ಬಿ.ಜಿ.ಎಸ್ ಪಿಯು ಕಾಲೇಜಿನನ ಎನ್.ಎಸ್.ಎಸ್ ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.