ADVERTISEMENT

ಯೋಗಾಸನದ ಮೂಲಕ ಅಮೃತ ಮಹೋತ್ಸವಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 4:04 IST
Last Updated 12 ಮಾರ್ಚ್ 2021, 4:04 IST
ಯೋಗಾಸನ ಕಾರ್ಯಕ್ರಮ
ಯೋಗಾಸನ ಕಾರ್ಯಕ್ರಮ   

ಚಿಕ್ಕಬಳ್ಳಾಪುರ (ವಿದುರಾಶ್ವತ್ಥ): ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಿದುರಾಶ್ವತ್ಥದಲ್ಲಿ ಯೋಗಾಸನ ಕಾರ್ಯಕ್ರಮದ ಮೂಲಕ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಇಲ್ಲಿನ ವೀರಸೌಧದ ಬಳಿಯ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕದ ಸಮೀಪ ಪತಂಜಲಿ ಯೋಗ ಸಮಿತಿ ಯೋಗಾಸನ ಆಯೋಜಿಸಿತ್ತು‌. 75 ಯೋಗಪಟುಗಳು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಗೌರಿಬಿದನೂರು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ, ತಹಶೀಲ್ದಾರ್ ಶ್ರೀನಿವಾಸ್ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ADVERTISEMENT

ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ವೀರ ಯೋಧರ ಸ್ಮಾರಕಕ್ಕೆ ನಮನ ಸಲ್ಲಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.