ಚಿಕ್ಕಮಗಳೂರು: ತಾಲ್ಲೂಕಿನ ಮತ್ತಾವರ ಮೀಸಲು ಅರಣ್ಯದಲ್ಲಿ ಒತ್ತುವರಿ ಮಾಡಿ ಕಾಫಿ ತೋಟ ಮಾಡಿದ್ದ 20 ಎಕರೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು.
ವಸ್ತಾರೆ ಗ್ರಾಮದ ಸರ್ವೆ ನಂಬರ್ 369ರಲ್ಲಿ ಹಲವರು ಒತ್ತುವರಿ ಮಾಡಿ ಕಾಫಿ ಗಿಡಗಳನ್ನು ನೆಟ್ಟಿದ್ದರು. ಒತ್ತುವರಿ ಗುರುತು ಮಾಡಿದ್ದ ಅಧಿಕಾರಿಗಳು ಪೊಲೀಸರ ನೆರವಿನೊಂದಿಗೆ ಶನಿವಾರ ತೆರವು ಮಾಡಿದರು.
ಅರಣ್ಯ ಜಾಗದಲ್ಲಿದ್ದ ಕಾಫಿ ಗಿಡಗಳನ್ನು ಕತ್ತರಿಸಿ ಅರಣ್ಯ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ. ಕೊಪ್ಪ ಅರಣ್ಯ ವ್ಯಾಪ್ತಿಯಲ್ಲಿ ಒತ್ತುವರಿ ಗುರುತಿಸಿ ಮಾರ್ಕ್ ಮಾಡಲಾಗಿದ್ದು, ಭಾನುವಾರ ಕಾರ್ಯಾಚರಣೆ ನಡೆಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.