ಕಡೂರು: ‘ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ’ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಬೀರೂರು ಸಾರ್ವಜನಿಕ ಆಸ್ಪತ್ರೆಗೆ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ನೀಡಲಾದ ₹30 ಲಕ್ಷ ವೆಚ್ಚದ ಆಂಬುಲೆನ್ಸ್ ಹಸ್ತಾಂತರಿಸಿ ಅವರು ಮಾತನಾಡಿದರು.
ಕಡೂರು ಸಾರ್ವಜನಿಕ ಆಸ್ಪತ್ರೆಯ ನಿರ್ವಹಣೆ ಉತ್ತಮವಾಗಿದೆ. ಬೀರೂರು ಆಸ್ಪತ್ರೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೀರೂರು ಆಸ್ಪತ್ರೆಗೆ ಆಂಬುಲೆನ್ಸ್ ಸೌಲಭ್ಯ ಕಲ್ಪಿಸಿರುವುದರಿಂದ ತುರ್ತು ವೈದ್ಯಕೀಯ ಸ್ಪಂದನೆಗೆ ಅನುಕೂಲವಾಗಿದೆ’ ಎಂದರು.
ಬೀರೂರು ಆಸ್ಪತ್ರೆಯ ವೈದ್ಯಾಧಿಕಾರಿ ಕೆಂಚಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ರವಿಕುಮಾರ್, ಗುಮ್ಮನಹಳ್ಳಿ ಅಶೋಕ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.