ADVERTISEMENT

ಚಿಕ್ಕಮಗಳೂರು | ವಕೀಲರ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಂಧನಕ್ಕೆ ಎಸ್ಪಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2024, 13:45 IST
Last Updated 30 ಜೂನ್ 2024, 13:45 IST
ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ ಅವರು ಎಸ್ಪಿ ವಿಕ್ರಮ ಅಮಟೆ ಅವರಿಗೆ ಮನವಿ ಸಲ್ಲಿಸಿದರು
ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ ಅವರು ಎಸ್ಪಿ ವಿಕ್ರಮ ಅಮಟೆ ಅವರಿಗೆ ಮನವಿ ಸಲ್ಲಿಸಿದರು   

ಚಿಕ್ಕಮಗಳೂರು: ವಕೀಲರ ಮೇಲೆ ಹಲ್ಲೆ ನಡೆಸಿರುವ ವ್ಯಕ್ತಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ಬಳಿಕ ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ ಮಾತನಾಡಿ, ಮಂಗಳೂರಿನಲ್ಲಿ ವಕೀಲ ಜಯಪ್ರಕಾಶ್ ಮತ್ತು ಪತ್ನಿ ಮೇಲೆ ಹಲ್ಲೆ ನಡೆದಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಜಾಮೀನು ರಹಿತ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಆಗ್ರಹಿಸಿದರು.

ಚಿಕ್ಕಮಗಳೂರು ವಕೀಲರ ಸಂಘದ ಸದಸ್ಯ ಉಮೇಶ್ ಅವರ ಮೇಲಿನ ಹಲ್ಲೆ ಪ್ರಕರಣ ಸಂಬಂಧ ತನಿಖೆ ಮುಕ್ತಾಯಗೊಂಡಿದ್ದು ಆರೋಪಿಗಳ ವಿರುದ್ಧ ಅಂತಿಮ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ. ಪರಿಶಿಷ್ಟ ಜಾತಿಯವರ ಮೇಲೆ ದೌರ್ಜನ್ಯ ನಿಷೇಧ ಕಾಯ್ದೆಯಡಿ ದೋಷಾರೋಪ ಸಲ್ಲಿಕೆ ಹಿನ್ನೆಲೆ ಆರೋಪಿತರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಆದ್ದರಿಂದ ತನಿಖಾಧಿಕಾರಿ ಆರೋಪಿತರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಮನವಿ ಮಾಡಿದರು. 

ADVERTISEMENT

ಮನವಿ ಸಲ್ಲಿಕೆ ವೇಳೆ ವಕೀಲರ ಸಂಘದ ಉಪಾಧ್ಯಕ್ಷ ಕೆ.ಎಸ್.ಶರತ್‍ಚಂದ್ರ, ಕಾರ್ಯದರ್ಶಿ ಆರ್. ಅನಿಲಕುಮಾರ್, ಖಜಾಂಚಿ ಡಿ.ಬಿ.ದೀಪಕ್, ಸಹ ಕಾರ್ಯದರ್ಶಿ ಎನ್.ವಿ.ಪ್ರಿಯದರ್ಶಿನಿ, ವಕೀಲರಾದ ರುದ್ರೇಶ್, ಸತೀಶ್, ಕೆಂಚೇಗೌಡ, ನಂದೀಶ್, ನಟರಾಜ್, ಅನಂತೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.