ADVERTISEMENT

ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಬಸ್ ಪ್ರಪಾತಕ್ಕೆ: ಮಹಿಳೆ ಸಾವು-ಹಲವರಿಗೆ ಗಾಯ

ಮೂಡಿಗೆರೆ ತಾಲ್ಲೂಕಿನ ಕಸ್ಕೆಬೈಲ್ ಸಮೀಪ ರಸ್ತೆ ಬದಿಯ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2023, 4:24 IST
Last Updated 4 ನವೆಂಬರ್ 2023, 4:24 IST
<div class="paragraphs"><p> ಮೂಡಿಗೆರೆ ತಾಲ್ಲೂಕಿನ ಕಸ್ಕೆಬೈಲ್ ಸಮೀಪ ರಸ್ತೆ ಬದಿಯ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್</p></div>

ಮೂಡಿಗೆರೆ ತಾಲ್ಲೂಕಿನ ಕಸ್ಕೆಬೈಲ್ ಸಮೀಪ ರಸ್ತೆ ಬದಿಯ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್

   

ಮೂಡಿಗೆರೆ(ಚಿಕ್ಕಮಗಳೂರು): ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಖಾಸಗಿ ಬಸ್‌ ಮೂಡಿಗೆರೆ ತಾಲ್ಲೂಕಿನ ಕಸ್ಕೆಬೈಲ್ ಸಮೀಪ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಯಲಹಂಕದ ನಿವಾಸಿ ಸುರೇಖಾ(45) ಮೃತಪಟ್ಟಿದ್ದು, ಬಸ್‌ನಲ್ಲಿದ್ದ ಇನ್ನೂ 17 ಜನ ಗಾಯಗೊಂಡಿದ್ದಾರೆ. ಮೂಡಿಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್‌ನಲ್ಲಿ 48 ಪ್ರವಾಸಿಗರು ಇದ್ದರು. ಬೆಳಿಗಿನ ಜಾವ 4 ಗಂಟೆ ಸುಮಾರಿನಲ್ಲಿ ಬೇಲೂರು ಕಡೆಯಿಂದ ವೇಗವಾಗಿ ಬಂದ ಬಸ್‌, ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಕಾಫಿ ತೋಟಕ್ಕೆ ಉರುಳಿದೆ. ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಬಂದು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಚೀಕನಹಳ್ಳಿ–ಕಸ್ಕೈಬೈಲು ನಡುವಿನ ಈ ತಿರುವಿನಲ್ಲಿ ಇತ್ತೀಚೆಗೆ 20ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ತಡೆಗೋಡೆ ನಿರ್ಮಿಸುವಂತೆ ಹತ್ತಾರು ಬಾರಿ ಮನವಿ ಮಾಡಿದ್ದರೂ, ಹೆದ್ದಾರಿ ವಿಭಾಗದ ಅಧಿಕಾರಿಗಳ ನಿರ್ಲಕ್ಷ್ಯದಿಂದ  ತಡೆಗೋಡೆ ನಿರ್ಮಾಣವಾಗಿಲ್ಲ. ಆದ್ದರಿಂದ ವಾಹನಗಳು ಪ್ರಪಾತಕ್ಕೆ ಬೀಳುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.