ಚಿಕ್ಕಮಗಳೂರು: ‘ಹಿಂದೂಗಳ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದು ಮಾಡಲಾಗುತ್ತಿದ್ದು, ರದ್ದು ಮಾಡಿರುವ ಕಾರ್ಡ್‌ಗಳಲ್ಲಿ ಬಡವರಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆಯೇ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದರು.
ಕೆಲವು ಜಾತಿಯ ಬಡವರು, ಒಂದು ಕೋಮಿನಲ್ಲಿ ಅನರ್ಹರಿದ್ದರೂ ಕಾರ್ಡ್ ರದ್ದುಪಡಿಸದಂತೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಇದೆ. ಜಾತಿ, ಮತದ ಆಧಾರದಲ್ಲಿ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವುದು ಸಂವಿಧಾನ ಬಾಹಿರ ಕೆಲಸ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಅವರು ಪ್ರತಿಕ್ರಿಯಿಸಿದರು.
ಇನ್ನೂ 15ರಿಂದ 20 ಲಕ್ಷ ಕಾರ್ಡ್‌ಗಳನ್ನು ರದ್ದುಪಡಿಸಲು ನೋಟಿಸ್ ನೀಡಿದ್ದಾರೆ. ಬಡವರು, ವಿಧವೆಯರು, ಒಂದುಗುಂಟೆ ಜಮೀನು ಇಲ್ಲದವರ ಕಾರ್ಡ್‌ಗಳೂ ರದ್ದಾಗಿವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.