ಚಿಕ್ಕಮಗಳೂರು: ‘ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಮತ್ತು ಸುತ್ತಮುತ್ತಲ ಗಿರಿಶ್ರೇಣಿಯಲ್ಲಿ ಅತಿಯಾದ ಮಳೆ ಸುರಿಯುತ್ತಿರುವುದರಿಂದ ಗಿರಿಶ್ರೇಣಿಗೆ ಪ್ರವಾಸಿಗರು ವಾರಾಂತ್ಯದಲ್ಲಿ ಬರಬಾರದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸಲಹೆ ನೀಡಿದ್ದಾರೆ.
‘ಗಿರಿಶ್ರೇಣಿಯಲ್ಲಿ ಅಲ್ಲಲ್ಲಿ ಗುಡ್ಡಗಳು ಕುಸಿಯುವ, ರಸ್ತೆ ಬದಿಯ ಮರಗಳು ಮತ್ತು ವಿದ್ಯುತ್ ಕಂಬಗಳು ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಜಲಪಾತಗಳು ರಭಸವಾಗಿ ಹರಿಯುತ್ತಿದ್ದು, ಫೋಟೊ ತೆಗೆಸಿಕೊಳ್ಳುವ ಸಂದರ್ಭದಲ್ಲಿ ಅವಘಡಗಳು ಸಂಭವಿಸುವ ಸಾಧ್ಯತೆಗಳೂ ಇವೆ. ಅನಾಹುತ ಸಂಭವಿಸಿದರೆ ಘಟನಾ ಸ್ಥಳಕ್ಕೆ ತುರ್ತಾಗಿ ತಲುಪುವುದು ಕಷ್ಟ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿಗರು ಜುಲೈ 28ರಿಂದ(ಶುಕ್ರವಾರ) 31ರ(ಸೋಮವಾರ) ತನಕ ಪ್ರವಾಸ ಕೈಗೊಳ್ಳಬಾರದು’ ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.