ADVERTISEMENT

ಚಿಕ್ಕಮಗಳೂರು: ಪ್ರತಿಭಟನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ವಕೀಲರು

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2023, 12:36 IST
Last Updated 1 ಡಿಸೆಂಬರ್ 2023, 12:36 IST
   

ಚಿಕ್ಕಮಗಳೂರು: ವಕೀಲ ಪ್ರೀತಂ ಮೇಲೆ ಪೊಲೀಸರು ನಡೆಸಿರುವ ಹಲ್ಲೆ ಖಂಡಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವಕೀಲರು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.

ಹಲ್ಲೆ ನಡೆಸಿರುವ ಪೊಲೀಸರನ್ನು ಬಂಧಿಸುವ ತನಕ ಹೋರಾಟ ಕೈಬಿಡುವುದಿಲ್ಲ ಎಂದು ವಕೀಲರು ಪಟ್ಟು ಹಿಡಿದ್ದರು. ಶುಕ್ರವಾರ ಮಧ್ಯಾಹ್ನ  ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರು ಪ್ರತಿಭಟನಾನಿರತ ವಕೀಲರೊಂದಿಗೂ ಮಾತನಾಡಿದರು.

‘ಶೀಘ್ರವೇ ಬಂಧನ ಮಾಡಲಾಗವುದು ಎಂಬ ಭರವಸೆಯನ್ನು ಪೊಲೀಸರು ನ್ಯಾಯಾಲಯಕ್ಕೆ ನೀಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ಅವರೂ ಮನವಿ ಮಾಡಿದ್ದಾರೆ. ಆದ್ದರಿಂದ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದೇವೆ. ಆರೋಪಿಗಳ ಬಂಧನವಾಗದಿದ್ದರೆ ರಾಜ್ಯದ ಎಲ್ಲಾ ವಕೀಲರನ್ನು ಚಿಕ್ಕಮಗಳೂರಿಗೆ ಕರೆತಂದು ಹೋರಾಟ ಮುಂದುವರಿಸಲಾಗುವುದು’ ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ ರೆಡ್ಡಿ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.