ADVERTISEMENT

ತೋಟದ ಮನೆಗೆ ನಿರಂತರ ವಿದ್ಯುತ್ ಕಲ್ಪಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2022, 4:50 IST
Last Updated 18 ಅಕ್ಟೋಬರ್ 2022, 4:50 IST
ಕಡೂರಿನ ಮೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಶೆಟ್ಟಿಹಳ್ಳಿ ಗ್ರಾಮದಲ್ಲಿನ ಶಾಲೆಯ ಬಳಿ ಇರುವ ಟಿಸಿಯನ್ನು ಬದಲಾಯಿಸಿಕೊಡುವಂತೆ ಗ್ರಾಮದ ಶೆಟ್ಟಿಹಳ್ಳಿ ಮಲ್ಲಿಕಾರ್ಜುನ್ ಅವರು ಪ್ರಭಾರ ಎಇಇ ಮಂಜೇಗೌಡ ಅವರಿಗೆ ಮನವಿ ಸಲ್ಲಿಸಿದರು
ಕಡೂರಿನ ಮೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಶೆಟ್ಟಿಹಳ್ಳಿ ಗ್ರಾಮದಲ್ಲಿನ ಶಾಲೆಯ ಬಳಿ ಇರುವ ಟಿಸಿಯನ್ನು ಬದಲಾಯಿಸಿಕೊಡುವಂತೆ ಗ್ರಾಮದ ಶೆಟ್ಟಿಹಳ್ಳಿ ಮಲ್ಲಿಕಾರ್ಜುನ್ ಅವರು ಪ್ರಭಾರ ಎಇಇ ಮಂಜೇಗೌಡ ಅವರಿಗೆ ಮನವಿ ಸಲ್ಲಿಸಿದರು   

ಕಡೂರು: ತೋಟದಮನೆಗಳಿಗೆ ನಿರಂತರ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಅನುಮತಿಗಾಗಿ ಪತ್ರ ಬರೆಯಲಾಗಿದೆ. ಮಂಜೂರಾತಿ ಆದೇಶ ದೊರಕಿದ ಕೂಡಲೇ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾರ ಎಇಇ ಮಂಜೇಗೌಡ ತಿಳಿಸಿದರು.

ಪಟ್ಟಣದ ಮೆಸ್ಕಾಂ ಉಪ ವಿಭಾಗೀಯ ಕಚೇರಿಯಲ್ಲಿ ಸೋಮವಾರ ನಡೆದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

ಗುಣಸಾಗರ ಭಾಗದ ರೈತರು ಸೇರಿದಂತೆ ಹಲವರು ಮನವಿ ಸಲ್ಲಿಸಿದ್ದಾರೆ, ಈ ಬಗ್ಗೆ ನಿಗಮದ ಕಚೇರಿಗೆ ಅನುಮತಿ ಕೋರಲಾಗಿದೆ ಎಂದು ಅವರು ವಿವರಿಸಿದರು.

ADVERTISEMENT

ಶೆಟ್ಟಿಹಳ್ಳಿ ಗ್ರಾಮದ ಎಸ್.ಬಿ. ಮಲ್ಲಿಕಾರ್ಜುನ್ ಮಾತನಾಡಿ, ವಾಹನ ಡಿಕ್ಕಿ ಹೊಡೆದ ಪರಿಣಾಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪಕ್ಕದ ವಿದ್ಯುತ್ ಪರಿವರ್ತಕ ಮತ್ತು ಕಂಬಗಳು ವಾಲಿವೆ. ಇಲ್ಲಿ ಎಲ್ಲರೂ ಓಡಾಡುತ್ತಾರೆ. ವಿದ್ಯುತ್ ಅವಘಡ ಆಗದಂತೆ ಮೆಸ್ಕಾಂ ಅಧಿಕಾರಿಗಳು ದುರಸ್ತಿ ಮಾಡಬೇಕು ಎಂದು ಕೋರಿದರು.

ಪ್ರತಿಕ್ರಿಯಿಸಿದ ಮಂಜೇಗೌಡ, ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿ, ಪರಿವರ್ತಕ ಬದಲಾವಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿವರ್ತಕ ಬದಲಾವಣೆಗೆ ಮತ್ತು ಹೆಚ್ಚುವರಿ ಅಳವಡಿಸುವ ಕುರಿತು ಬಹಳಷ್ಟು ಗ್ರಾಹಕರು ಸಮಸ್ಯೆಗಳನ್ನು ತೋಡಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.