ADVERTISEMENT

ಕಳಸ: ಸಂಸದ, ವಿಧಾನಪರಿಷತ್ ಸದಸ್ಯರಿಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 13:46 IST
Last Updated 22 ಜೂನ್ 2024, 13:46 IST
ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಕಳಸದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಸನ್ಮಾನಿಸಿದರು
ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಕಳಸದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಸನ್ಮಾನಿಸಿದರು   

ಕಳಸ: ಬಿಜೆಪಿ ಮತ್ತು ಜೆಡಿಎಸ್ ವತಿಯಿಂದ ಶುಕ್ರವಾರ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮುಖಂಡ ಸಿ.ಟಿ.ರವಿ ಅವರನ್ನು ಪಟ್ಟಣದಲ್ಲಿ ಅಭಿನಂದಿಸಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಿಜೆಪಿ ಮುಖಂಡ ಶೇಷಗಿರಿ, ‘ಕಳಸ ತಾಲ್ಲೂಕಿನಲ್ಲಿ ಬಿಜೆಪಿ ಎಲ್ಲ ಮತಕೇಂದ್ರಗಳಲ್ಲೂ ಮುನ್ನಡೆ ಗಳಿಸಿದೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಕುರಿತು ಗಮನ ಹರಿಸಬೇಕು’ ಎಂದರು

ಜೆಡಿಎಸ್ ಮುಖಂಡ ಮಂಜಪ್ಪಯ್ಯ ಮಾತನಾಡಿ, ‘ಕಳಸದಲ್ಲಿ ಉತ್ತಮ ಗುಣಮಟ್ಟದ ವಿದ್ಯಾಸಂಸ್ಥೆ ಸ್ಥಾಪನೆ ಆಗಬೇಕು. ಕಾಡುಪ್ರಾಣಿಗಳ ಹಾವಳಿಯಿಂದ ಕೃಷಿಕರು ಕಂಗಾಲಾಗಿದ್ದು, ಈ ಕುರಿತು ಸಂಸದರು, ಶಾಸಕರು ಗಮನ ಹರಿಸಬೇಕು’ ಎಂದರು.

ADVERTISEMENT

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ‘ಕಳಸದ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳ ಪರಿಹಾರಕ್ಕೆ ಆದ್ಯತೆ ಮೇರೆಗೆ ಕೆಲಸ ಮಾಡುತ್ತೇನೆ’ ಎಂದರು.

ಬಿಜೆಪಿ ಮುಖಂಡ ಸಿ.ಟಿ. ರವಿ ಮಾತನಾಡಿ, ‘ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಜನರ ಮೇಲೆ ತೆರಿಗೆಗಳ ಭಾರ ಹೊರಿಸುತ್ತಿದೆ. ಕಳಸದ ಬೇಡಿಕೆಗಳ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ದನಿ ಎತ್ತುತ್ತೇನೆ’ ಎಂದರು. 

ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ, ನಾಗಭೂಷಣ್, ಶ್ರೀಕಾಂತ್, ಜೆಡಿಎಸ್ ಮುಖಂಡರಾದ ಜ್ವಾಲನಯ್ಯ, ಸಂತೋಷ್, ಮಹೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.