ಮೂಡಿಗೆರೆ: ಭತ್ತದ ಬೆಳೆ ವಿಮೆ ಪಾವತಿಸಲು ಇದೇ 16 ಕಡೆಯ ದಿನವಾಗಿದೆ ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಸುಮಾ ತಿಳಿಸಿದ್ದಾರೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮೂಡಿಗೆರೆ ಹಾಗೂ ಕಳಸ ತಾಲ್ಲೂಕಿನಾದ್ಯಂತ ಭತ್ತದ ಬೆಳೆಗೆ ವಿಮೆ ನೋಂದಣಿ ಆರಂಭಗೊಂಡಿದೆ. ಭತ್ತದ ಬೆಳೆಗಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಹತ್ತಿರದ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರಗಳು ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ನಿಗದಿತ ವಿಮಾ ಕಂತು ಮೊತ್ತ ಎಕರೆಗೆ ₹510 ಪಾವತಿಸಿ ಬೆಳೆ ವಿಮೆಗೆ ನೋಂದಣಿ ಮಾಡಿಸಿಕೊಳ್ಳಬಹುದಾಗಿದ್ದು, ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.