ADVERTISEMENT

ಪ್ರಜಾಪ್ರಭುತ್ವ ದಿನ: 36 ಕಿ.ಮೀ.ಮಾನವ ಸರಪಳಿ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2024, 14:06 IST
Last Updated 15 ಸೆಪ್ಟೆಂಬರ್ 2024, 14:06 IST
ಕಡೂರಿನಲ್ಲಿ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಮಾನವ ಸರಪಳಿ ರಚಿಸಲಾಯಿತು. ತಹಶೀಲ್ದಾರ್ ಪೂರ್ಣಿಮಾ,ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಭಾಗವಹಿಸಿದ್ದರು.
ಕಡೂರಿನಲ್ಲಿ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಮಾನವ ಸರಪಳಿ ರಚಿಸಲಾಯಿತು. ತಹಶೀಲ್ದಾರ್ ಪೂರ್ಣಿಮಾ,ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಭಾಗವಹಿಸಿದ್ದರು.   

ಕಡೂರು: ಪ್ರಜಾಪ್ರಭುತ್ವ ದಿನದ ಅಂಗವಾಗಿ ಕಡೂರು ತಾಲ್ಲೂಕು ಆಡಳಿತದ ವತಿಯಿಂದ 36 ಕಿ‌.ಮೀ. ಉದ್ದದ ಮಾನವ ಸರಪಳಿ ರಚಿಸಲಾಗಿತ್ತು. ಸಖರಾಯಪಟ್ಟಣದ ಗಡಿಯಿಂದ ತರೀಕೆರೆ ಗಡಿಯವರೆಗೆ ಶಾಲಾ ಮಕ್ಕಳು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವ ದಿನದಲ್ಲಿ ಭಾಗವಹಿಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾಲಾರ್ಪಣೆ ಮಾಡಿದರು. ತಹಶೀಲ್ದಾರ್ ಪೂರ್ಣಿಮಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪುರಸಭೆ ಉಪಾಧ್ಯಕ್ಷೆ ಮಂಜುಳಾ ಚಂದ್ರು, ಇ.ಒ ಪ್ರವೀಣ್, ಬಿಇಒ ಸಿದ್ದರಾಜ ನಾಯ್ಕ, ಸಿಪಿಐ ರಫೀಕ್, ಸದಸ್ಯರು, ದಲಿತ ಸಂಘರ್ಷ ಸಮಿತಿ ಸದಸ್ಯರು, ಬ್ಲೂ ಆರ್ಮಿ ಮಾದಿಗರ ಧ್ವನಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಶೂದ್ರ ಶ್ರೀನಿವಾಸ್ ಭಾಗವಹಿಸಿದ್ದರು.

ADVERTISEMENT

ಪ್ರಜ್ಞಾ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.