ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಚಳವಳಿ ತೀವ್ರಗೊಂಡಿದ್ದು, ಕಾರ್ಯಕರ್ತರು ಪಕ್ಷದ ಕಚೇರಿ ಗದ್ಧಲ ಎಬ್ಬಿಸಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಆರಗ ಜ್ಞಾನೇಂದ್ರ, ಮುಖಂಡ ಭಾನು ಪ್ರಕಾಶ್ ಸೇರಿ ಹಲವು ಮುಖಂಡರ ನೇತೃತ್ವದಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಸಭೆ ಭಾನುವಾರ ಚಿಕ್ಕಮಗಳೂರಿನಲ್ಲಿ ನಡೆಯುತ್ತಿತ್ತು. ಈ ವೇಳೆ ವೇದಿಕೆ ಬಳಿಗೆ ಬಂದ ಕಾರ್ಯಕರ್ತರು, 'ಶೋಭಾ ಕರಂದ್ಲಾಜೆ ಅವರನ್ನು ಅಭ್ಯರ್ಥಿ ಮಾಡಬಾರದು. ಚಿಕ್ಕಮಗಳೂರು ಜಿಲ್ಲೆಯವರಿಗೇ ಟಿಕೆಟ್ ನೀಡಬೇಕು. ಹತ್ತು ವರ್ಷಗಳಿಂದ ಸಂಸದೆಯಾಗಿರುವ ಶೋಭಾ ಅವರಿಗೆ ಪಕ್ಷದ ಬ್ಲಾಕ್ ಸಮಿತಿ ಮುಖಂಡರ ಪರಿಚಯವೇ ಇಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸ್ಥಳಕ್ಕೆ ಬಂದ ಸಿ.ಟಿ.ರವಿ, 'ನಮ್ಮ ವೈಮಸ್ಸಿನಿಂದ ದೇಶಕ್ಕೆ ಆಪತ್ತು ಬರಬಾರದು. ಯಾರೇ ಅಭ್ಯರ್ಥಿಯಾದರೂ ಮೋದಿಯವರೇ ಅಭ್ಯರ್ಥಿ ಎಂದು ಭಾವಿಸಿ' ಎಂದು ಮನವಿ ಮಾಡಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.