ADVERTISEMENT

ಕೆಎಸ್‌ಆರ್‌ಟಿಸಿ ಬಸ್‌ನ ಡೋರ್‌ ಲಾಕ್‌ ತುಂಡಾಗಿ ಮಹಿಳೆಗೆ ಗಾಯ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 14:05 IST
Last Updated 2 ಜುಲೈ 2024, 14:05 IST
ಮಹಿಳೆ ಬಿದ್ದಂತಹ ಕೆಎಸ್ಆರ್ ಟಿಸಿ ಬಸ್ ಛಾಯಾಚಿತ್ರ
ಮಹಿಳೆ ಬಿದ್ದಂತಹ ಕೆಎಸ್ಆರ್ ಟಿಸಿ ಬಸ್ ಛಾಯಾಚಿತ್ರ   

ಆಲ್ದೂರು: ಚಿಕ್ಕಮಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಡೋರ್ ಲಾಕ್ ತುಂಡಾದ ಕಾರಣ, ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಬಿದ್ದು ಗೃಹಿಣಿಯೊಬ್ಬರು ಗಾಯಗೊಂಡಿದ್ದಾರೆ.

ಕಣತಿ ಗ್ರಾಮದ ನಿವಾಸಿ ಶಕುಂತಲಾ (55) ಗಾಯಗೊಂಡವರು. ಅವರು ಈ ಬಸ್‌ನಲ್ಲಿ ಬಾಳೆಹೊನ್ನೂರಿಗೆ ಪ್ರಯಾಣಿಸುತ್ತಿದ್ದರು. ಇದೇ ಮಾರ್ಗದಲ್ಲಿ ಚಿಕ್ಕಮಗಳೂರಿಗೆ ಸಂಚರಿಸುತ್ತಿದ್ದ ಬಾಳೆಹೊನ್ನೂರು ಪಿಎಸ್ಐ ರವೀಶ್ ಸಮಯ ಪ್ರಜ್ಞೆ ಮೆರೆದು, ತಮ್ಮ ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದರು.

‘ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಆದರೆ, ಗ್ರಾಮೀಣ ಭಾಗದಲ್ಲಿ ಕಳಪೆ ಬಸ್‌ಗಳು ಸಂಚರಿಸುತ್ತಿರುವುದರಿಂದ ಅಪಾಯ ಸದಾ ಜನರ ಬೆನ್ನಿಗಿದೆ. ಸರ್ಕಾರ ಜನರ ಜೀವದ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಇನ್ನಾದರೂ ಕೆಎಸ್‌ಆರ್‌ಟಿಸಿ ಗ್ರಾಮೀಣ ಪ್ರದೇಶಗಳಿಗೆ ಗುಣಮಟ್ಟದ ಬಸ್ಸುಗಳನ್ನು ಒದಗಿಸಬೇಕು’ ಎಂದು  ಸ್ಥಳೀಯ ಮುಖಂಡರಾದ ಐದಳ್ಳಿ ಸಿಂಧು ಕುಮಾರ್ ಆಗ್ರಹಿಸಿದರು.

ADVERTISEMENT
ಬಸ್ಸಿನ ಡೋರ್ ಲಾಕ್ ಮುರಿದಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.