ADVERTISEMENT

ಚಿಕ್ಕಮಗಳೂರು | ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 14:33 IST
Last Updated 19 ಅಕ್ಟೋಬರ್ 2024, 14:33 IST
ವಿದ್ಯಾರ್ಥಿಗಳು ತಯಾರಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಗಣ್ಯರು ವೀಕ್ಷಿಸಿದರು
ವಿದ್ಯಾರ್ಥಿಗಳು ತಯಾರಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಗಣ್ಯರು ವೀಕ್ಷಿಸಿದರು   

ಚಿಕ್ಕಮಗಳೂರು: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಚಿಕ್ಕಮಗಳೂರು ಹಾಗೂ ಹಾಸನ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಜಾನುವಾರುಗಳಿಗೆ ತಗುಲುವ ಕಾಲುಬಾಯಿ ರೋಗಕ್ಕೆ ಅ. 21ರಿಂದ ನ. 20ರವರೆಗೆ ಜಿಲ್ಲೆಯಾದ್ಯಂತ ದನ, ಎಮ್ಮೆಗಳಿಗೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎರಡನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಲಸಿಕೆದಾರರು ಪ್ರತಿ ದಿನ ಬೆಳಿಗ್ಗೆ ತಮ್ಮ ಗ್ರಾಮಗಳಿಗೆ ಭೇಟಿ ನೀಡಿದಾಗ, ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಬೇಕಾಗಿ ಜಿಲ್ಲೆಯ ಪಶು ಸಂಗೋಪನಾ ಇಲಾಖೆಯ ವತಿಯಿಂದ ಮನವಿ ಮಾಡಲಾಗಿದೆ.

ಲಸಿಕಾ ಕಾರ್ಯಕ್ರಮವನ್ನು ಪ್ರತಿದಿನ ಯಾವ ಯಾವ ಗ್ರಾಮಗಳಲ್ಲಿ ಹಾಕಲಾಗುತ್ತದೆ ಎಂಬ ಮಾಹಿತಿಯನ್ನು ಸದರಿ ಗ್ರಾಮಕ್ಕೆ ಮೂರು ದಿನ ಮುಂಚಿತವಾಗಿ ತಿಳಿಯ ಪಡಿಸಲಾಗುವುದು.

ADVERTISEMENT

ವಿಜ್ಞಾನ ವಸ್ತು ಪ್ರದರ್ಶನ ಚಿಕ್ಕಮಗಳೂರು: ಎ.ಪಿ.ಜೆ ಅಬ್ದುಲ್ ಕಲಾಂ ಜನ್ಮದಿನ ಹಿನ್ನೆಲೆ ನಗರದ ಶ್ರೀಸಾಯಿ ಏಂಜಲ್ಸ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಆಯೋಜನೆ ಮಾಡಲಾಗಿತ್ತು. ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಯೋಜನಾ ವಿಜ್ಞಾನಿ ಎಸ್. ಸುನಯಾನ ಉದ್ಘಾಟಿಸಿದರು. ಶಾಲೆಯ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ಪ್ರಾಯೋಗಿಕ ಮಾದರಿಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪ್ರದರ್ಶನ ಮಾಡಿದರು. ಶ್ರೀಸಾಯಿ ಏಂಜಲ್ಸ್ ಶಾಲೆಯ ಸಂಸ್ಥಾಪಕರಾದ ವಿಜಯ ನಾಗೇಶ್ ನಾಗೇಶ್ ಪ್ರಾಂಶುಪಾಲ ಯಾಮಿನಿ ಸವೂರ್ ಹಾಗೂ ಜಂಟಿ ಕಾರ್ಯದರ್ಶಿಗಳಾದ ಎಂ.ಜೆ.ಕಾರ್ತಿಕ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.