ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರಿನಲ್ಲಿ ಸರ್ಕಾರಿ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮ ಮಂಜೂರಾತಿಗೆ ಸಂಬಂಧಿಸಿದಂತೆ ಎಫ್‌ಡಿಎ ಎಚ್.ಸಿ.ಮಹೇಶ್, ಗ್ರಾಮ ಲೆಕ್ಕಿಗರಾದ ಎನ್.ಎನ್.ಗಿರೀಶ್, ಬಿ.ವೈ.ಗೀತಾ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಮೂವರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಬಾಳೂರಿನ ಸರ್ವೆ ನಂಬರ್ 168ರಲ್ಲಿ ಗೋಮಾಳ ಜಾಗವನ್ನು ತಲಾ 4.38ಎಕರೆಯಂತೆ 11 ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿರುವ ಆರೋಪವನ್ನು ಎದುರಿಸುತ್ತಿದ್ದಾರೆ.
‘ಆರೋಪಿಗಳ ಪತ್ತೆ ನಿಟ್ಟಿನಲ್ಲಿ ಶೋಧ ಶುರುವಾಗಿದೆ. ತಂಡ ವಿವಿಧೆಡೆಗೆ ತೆರಳಿ ತಲಾಶ್ ನಡೆಸಿದೆ. ಶೀಘ್ರದಲ್ಲಿ
ಪತ್ತೆ ಹಚ್ಚುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ‘ಪ್ರಜಾವಾಣಿ’ಗೆ ತಿಳಿಸಿದರು.
ತಹಶೀಲ್ದಾರ್ ಎಂ.ಎ.ನಾಗರಾಜ್ ಅವರು ಮೂಡಿಗೆರೆ ಠಾಣೆಯಲ್ಲಿ ಮೂವರ ವಿರುದ್ಧ ದಾಖಲಿಸಿದ್ದಾರೆ. ಐಪಿಸಿ 409 (ಸರ್ಕಾರಿ ನೌಕರನಿಂದ ನಂಬಿಕೆ ದ್ರೋಹ), 34 ಅಪರಾಧ ಸಂಚು, ಕರ್ನಾಟಕ ಭೂಕಂದಾಯ ಕಾಯ್ದೆ–2007ನಡಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.