ಚಿಕ್ಕಮಗಳೂರು: ಮತ್ತಾವರ ದಂಬದಹಳ್ಳಿ ಗ್ರಾಮದಲ್ಲಿನ ಸ್ಮಶಾನ ಭೂಮಿ ಸಮಸ್ಯೆಯನ್ನು ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಬಗೆಹರಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಾಶಾಂತ್ ತಿಳಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಗ್ರಾಮಸ್ಥರು ಸಮಸ್ಯೆ ಗಮನ ಸೆಳೆದಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಉಮಾ ಪ್ರಶಾಂತ್, ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು.
200 ಕುಟುಂಬ ಇರುವ ಗ್ರಾಮದಲ್ಲಿ ಸ್ಮಶಾನಕ್ಕೆ ಭೂಮಿ ಇಲ್ಲದಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ಕಂದಾಯ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದರು. ‘ಗ್ರಾಮದ ಯುವಕರು ದುಶ್ಚಟಕ್ಕೆ ಬಲಿಯಾಗಬಾರದು. ಮಾದಕ ವಸ್ತುಗಳಿಂದ ದೂರವಿರಬೇಕು. ಸೂಕ್ತ ಶಿಕ್ಷಣ ಪಡೆಯಬೇಕು’ ಎಂದು ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.