ADVERTISEMENT

ಕನ್ನಡ ಜಗತ್ತಿನ ಎಲ್ಲ ಭಾಷೆಗಳ ರಾಣಿ: ಎಂ.ಎಲ್.ಪ್ರಾಣೇಶ್

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2024, 15:32 IST
Last Updated 3 ನವೆಂಬರ್ 2024, 15:32 IST
ನರಸಿಂಹರಾಜಪುರ ತಾಲ್ಲೂಕು ಶೆಟ್ಟಿಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಕಡಹಿನಬೈಲು ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ಶಿಕ್ಷಕರು, ಗ್ರಾಮಸ್ಥರು ಭಾಗವಹಿಸಿದ್ದರು
ನರಸಿಂಹರಾಜಪುರ ತಾಲ್ಲೂಕು ಶೆಟ್ಟಿಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಕಡಹಿನಬೈಲು ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ಶಿಕ್ಷಕರು, ಗ್ರಾಮಸ್ಥರು ಭಾಗವಹಿಸಿದ್ದರು   

ಶೆಟ್ಟಿಕೊಪ್ಪ(ಎನ್.ಆರ್.ಪುರ): ‘ಆಚಾರ್ಯ ವಿನೋದ ಬಾವೆಯವರು ಕನ್ನಡವನ್ನು ಜಗತ್ತಿನ ಎಲ್ಲಾ ಭಾಷೆಗಳ ರಾಣಿ’ ಎಂದು ಕರೆದಿದ್ದಾರೆ ಎಂದು ಸಿದ್ಧಿವಿನಾಯಕ ಸೇವಾ ಸಮಿತಿಯ ಅಧ್ಯಕ್ಷ ಎಂ.ಎಲ್.ಪ್ರಾಣೇಶ್ ಹೇಳಿದರು.

ತಾಲ್ಲೂಕಿನ ಶೆಟ್ಟಿಕೊಪ್ಪ ಗ್ರಾಮದಲ್ಲಿ ಶುಕ್ರವಾರ  ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್‌ನ  ತಾಲ್ಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಎನ್.ಎಂ.ಕಾಂತರಾಜ್ ಮಾತನಾಡಿದರು.

ADVERTISEMENT

ಕಡಹಿನಬೈಲು ಗ್ರಾಮ ಪಂಚಾಯಿತಿ ಸದಸ್ಯ ಎ.ಬಿ.ಮಂಜುನಾಥ್ ಮಾತನಾಡಿ, ‘ರ್ನಾಟಕ ರಾಜ್ಯೋತ್ಸವ ನಾಡ ಹಬ್ಬವಾಗಿದ್ದು ಇದನ್ನು ಪ್ರತಿಯೊಬ್ಬರು ಆಚರಿಸುವ ಮೂಲಕ ನಾಡಿನ ನೆಲ, ಜಲ, ಭಾಷೆ, ಕಲೆಗೆ ಗೌರವ ಸೂಚಿಸಬೇಕು’ ಎಂದರು.

ಕಡಹಿನಬೈಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುನಿಲ್ ಕುಮಾರ್, ಸದಸ್ಯರಾದ ಶೈಲಾ ಮಹೇಶ್, ವಾಣಿ ನರೇಂದ್ರ, ಪೂರ್ಣಿಮಾ ಸಂತೋಷ್, ಸರ್ಕಾರಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಜಗದೀಶ್, ಮುಖ್ಯ ಶಿಕ್ಷಕಿ ಶುಭಾ, ಶಿಕ್ಷಕರಾದ ಅರುಣ್ ಕುಮಾರ್, ಮಲ್ಲಿಕಾರ್ಜುನ್, ರಾಧಾಮಣಿ, ಅಂಗನವಾಡಿ ಶಿಕ್ಷಕಿ ಎಸ್.ವಿ.ಗಾಯತ್ರಿ, ಆಟೊ ಸಂಘದ ಅಧ್ಯಕ್ಷ ಅಸ್ಬಾಕ್, ಅನೂಪ್ ಕುಮಾರ್, ಎ.ಬಿ. ಉಮೇಶ್, ಧರ್ಮಯ್ಯ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.