ಚಿಕ್ಕಮಗಳೂರು: ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಅಲ್ಲಲ್ಲಿ ಸೇತುವೆಗಳು ಮುಳುಗಿದ್ದು, ಸಂಪರ್ಕ ಕಡಿತಗೊಂಡಿದೆ. ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಜಿಲ್ಲೆಯ ಐದು ತಾಲ್ಲೂಕಿನ ಶಾಲಾ –ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು ರಜೆ ಘೋಷಣೆ ಮಾಡಿದೆ.
ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಕಳಸ ಮತ್ತು ಶೃಂಗೇರಿ ತಾಲ್ಲೂಕಿನ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಡಬಿಡದೆ ಮಳೆ ಸುರಿಯುತ್ತಿರುವುದರಿಂದ ಬಾಳೆಹೊನ್ನೂರು–ಮಾಗುಂಡಿ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ಸಂಪರ್ಕ ಕಡಿತಗೊಂಡಿದೆ.
ಹಲವೆಡೆ ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. ಕಳಸ–ಬಾಳೆಹೊನ್ನೂರು ನಡುವಿನ ತೆಪ್ಪದಗುಂಡಿ, ಬೈರೇಗುಡ್ಡದಲ್ಲಿ ರಸ್ತೆ ಮೇಲೆ ಭದ್ರಾ ನದಿ ನೀರು ಹರಿಯುತ್ತಿದ್ದು, ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.