ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಡೀ ರಾತ್ರಿ ಮಳೆ ಅಬ್ಬರಿಸಿದ್ದು, ಮುಳ್ಳಯ್ಯನಗಿರಿ ಸುತ್ತಮುತ್ತ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೋರ್ಗರೆದು ಸುರಿಯುತ್ತಿರುವ ಮಳೆಗೆ ಮುಳ್ಳಯ್ಯನಗಿರಿ ಮತ್ತು ಬಾಬಾಬುಡನ್ ಗಿರಿಯಲ್ಲಿ ರಸ್ತೆಯಲ್ಲೇ ಎರಡೂ ಅಡಿಗೂ ಹೆಚ್ಚು ನೀರು ಹರಿಯುತ್ತಿದೆ.
ಹಿಂದೆಂದೂ ಕಂಡು ಕೇಳರಿಯದಷ್ಟು ಜೋರು ಮಳೆಯಾಗಿದೆ. ರಾತ್ರಿ ಇಡೀ ಸುರಿದ ಮಳೆಗೆ ಗುಡ್ಡ ಪ್ರದೇಶದ ಜನರಲ್ಲಿ ಆತಂಕ ಕಾಡುತ್ತಿದೆ ಎಂಬುದು ಸ್ಥಳೀಯರು ಅಭಿಪ್ರಾಯ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.