ಕೊಪ್ಪ: ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ಹಿರಿಕೆರೆ ಮೇಲ್ಭಾಗದಲ್ಲಿ ಖಾಸಗಿ ಲೇಔಟ್ ನಿರ್ಮಾಣವಾಗುತ್ತಿದ್ದು, ಇದರಿಂದ ಕುಡಿಯುವ ನೀರಿಗೆ ತೊಂದರೆಯಾಗಲಿದ್ದು, ಲೇಔಟ್ ಕಾಮಗಾರಿ ಸ್ಥಗಿತಗೊಳಿಸಲು ಆಗ್ರಹಿಸಿ ನ. 16ರಂದು ಸ್ವಯಂ ಪ್ರೇರಿತವಾಗಿ ಪಟ್ಟಣ ಬಂದ್‌ಗೆ ಕರೆನೀಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಕೆ.ದಿನೇಶ್ ಹೊಸೂರ್ ಹೇಳಿದರು.
ಪಟ್ಟಣದ ಜನರ ಸಂಪರ್ಕ ಮಾಡಿ ಅಭಿಪ್ರಾಯ ಪಡೆಯಲಾಗಿದೆ. ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರ ವರೆಗೆ ಸ್ವಯಂ ಪ್ರೇರಿತ ಬಂದ್ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಬಸ್ ನಿಲ್ದಾಣದ ಆವರಣದಲ್ಲಿ ಪ್ರತಿಭಟನಾ ಸಭೆ ಆಯೋಜಿಸಿದೆ. ಜನರಿಗೆ ಶುದ್ಧ ಕುಡಿಯುವ ನೀರು ಸಿಗಬೇಕು ಎಂಬ ಉದ್ದೇಶದಿಂದ ನಾವು ಜನಪರವಾಗಿ ಹೋರಾಟ ಮಾಡುತ್ತಿದ್ದೇವೆ ಎಂದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಿ.ಎಸ್.ಮಹಾಬಲ ರಾವ್, ಪ್ರಧಾನ ಕಾರ್ಯದರ್ಶಿ ಜೆ.ಪುಣ್ಯಪಾಲ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗಾಯತ್ರಿ ವಸಂತ್, ಉಪಾಧ್ಯಕ್ಷೆ ಗಾಯತ್ರಿ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಇದಿನಬ್ಬ, ಸದಸ್ಯೆ ಸುಜಾತಾ ವಸಂತ್, ಮುಖಂಡರಾದ ಜಯಂತ್, ದಿವಾಕರ್ ಭಟ್, ಎಚ್.ಆರ್.ಜಗದೀಶ್, ಅರುಣ್ ಶಿವಪುರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.