ಸೀತೂರು(ಎನ್.ಆರ್.ಪುರ): ಕಳೆದ ವರ್ಷ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದ ಸೀತೂರು ಗ್ರಾಮ ಪಂಚಾಯಿತಿಯ ಕೆರೆಗದ್ದೆಯಲ್ಲಿ, ಈ ಬಾರಿ ಆರೋಗ್ಯ ಇಲಾಖೆ ಸಿಬ್ಬಂದಿ ಮುಂಜಾಗ್ರತಾ ಕ್ರಮವಾಗಿ 6 ಉಣುಗು ಮಾದರಿ ಸಂಗ್ರಹಿಸಿ, ಶಿವಮೊಗ್ಗದ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದಾರೆ’ ಎಂದು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಸಾಂಕ್ರಾಮಿಕ ರೋಗಗಳ ತಜ್ಞ ಡಾ.ಆಕರ್ಷ್ ಹೇಳಿದರು.
ಇಲ್ಲಿನ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಗುರುವಾರ ಅವರು ಮಾತನಾಡಿದರು.
ಕಳೆದ ವರ್ಷ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದ ಕಾನೂರು ಗ್ರಾಮ ಪಂಚಾಯಿತಿಯ ಕಟ್ಟಿನಮನೆ, ತಟ್ಟೇಸರ, , ಗುಬ್ಬಿಗಾ ಗ್ರಾಮ ಪಂಚಾಯಿತಿಯ ವಗಡೆಕಲ್ಲು, ಮಾಳೂರು ದಿಣ್ಣೆ ಭಾಗದ ಅರಣ್ಯದಲ್ಲೂ ಮುನ್ನೆಚ್ಚರಿಕೆ ಕ್ರಮವಾಗಿ ಉಣುಗು ಮಾದರಿ ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ ಎಂದರು.
ಆರೋಗ್ಯ ನಿರೀಕ್ಷಣಾಧಿಕಾರಿ ದರ್ಶನ್, ಕ್ಷಯ ರೋಗ ಚಿಕಿತ್ಸಾ ಮೇಲ್ವೀಚಾರಕ ಪಿ. ಪವನ್‌ಕರ್, ಆಪ್ತ ಸಮಾಲೋಚಕ ಸುಹಾಸ್, ಸೀತೂರು ಗ್ರಾಮ ಪಂಚಾಯಿತಿ ಪಿಡಿಒ ಶ್ರೀನಿವಾಸ್, ಸಮುದಾಯ ಆರೋಗ್ಯ ಅಧಿಕಾರಿ ರಮ್ಯಕೃಷ್ಣ, ಆಶಾ ಕಾರ್ಯಕರ್ತೆಯರಾದ ಮಾಲಿನಿ, ವಸಂತಿ, ಹೇಮಾವತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.