ADVERTISEMENT

ಚಿಕ್ಕಮಗಳೂರು: ಮಹಿಳಾ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2019, 5:54 IST
Last Updated 2 ಮಾರ್ಚ್ 2019, 5:54 IST
 ಇನ್ಫೊಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಸಮ್ಮೇಳನಾಧ್ಯಕ್ಷರಾಗಿದ್ದು, ಮೆರವಣಿಗೆಯಲ್ಲಿ ಭಾಗವಹಿಸಿದ್ದರು. –ಪ್ರಜಾವಾಣಿ ಚಿತ್ರ
ಇನ್ಫೊಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಸಮ್ಮೇಳನಾಧ್ಯಕ್ಷರಾಗಿದ್ದು, ಮೆರವಣಿಗೆಯಲ್ಲಿ ಭಾಗವಹಿಸಿದ್ದರು. –ಪ್ರಜಾವಾಣಿ ಚಿತ್ರ    

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇಂದು ಮತ್ತು ನಾಳೆ ನಡೆಯಲಿರುವ ರಾಜ್ಯಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರೆಯಿತು.

ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಸಮ್ಮೇಳನದ ಉದ್ಘಾಟನೆ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಜಾನಕಿ ಉದ್ಘಾಟನೆ ನೆರವೇರಿಸಿದರು.

ಇನ್ಫೊಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಸಮ್ಮೇಳನಾಧ್ಯಕ್ಷರಾಗಿದ್ದು, ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್‌ ಅಧ್ಯಕ್ಷತೆ ವಹಿಸಿದ್ದಾರೆ.

ADVERTISEMENT

‘ಕನ್ನಡ ಸಾಹಿತ್ಯ ಮತ್ತು ಮಹಿಳಾ ನೋಟ’, ‘ವಿವಿಧ ಕ್ಷೇತ್ರಗಳಿಗೆ ಮಹಿಳೆಯರ ಕೊಡುಗೆ’, ‘ಮಹಿಳೆ ಮತ್ತು ಚಳವಳಿ’ ಗೋಷ್ಠಿ, ಕವಿಗೋಷ್ಠಿಗಳು ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.