ಜಯಪುರ (ಬಾಳೆಹೊನ್ನೂರು): ಬೀದಿ ನಾಯಿ ಜೊತೆ ಅಸಭ್ಯವಾಗಿ ವರ್ತಿಸಿ, ಪ್ರಾಣಿ ಹಿಂಸೆ ನೀಡಿದ ಆರೋಪದಡಿ ಸಮೀಪದ ಕಟ್ಟೆಮನೆಯ ಶಿವರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಜಯಪುರ ಬಸ್ ನಿಲ್ದಾಣದಲ್ಲಿರುವ ಜಯಪುರ ಎಂಟರ್ ಪ್ರೈಸಸ್ ಅಂಗಡಿಯ ಎದುರು ಕಟ್ಟೆಯ ಮೇಲೆ ಕುಳಿತ ವ್ಯಕ್ತಿಯೊಬ್ಬರು ನಾಯಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಅದಕ್ಕೆ ಹಿಂಸೆ ನೀಡಿರುವುದು ಅಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವ್ಯಕ್ತಿಯನ್ನು ಬಂಧಿಸಿದ್ದರು. ಅಕ್ಟೋಬರ್ 18ರಂದು ಬೆಳಗಿನ ಜಾವ ಘಟನೆ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.