ADVERTISEMENT

ಚಿಕ್ಕಮಗಳೂರು: ಡೆಂಗಿ ರೋಗಿಗಳ ಆರೋಗ್ಯ ವಿಚಾರಿಸಿದ ಸಚಿವ ಜಾರ್ಜ್‌

ಜಿಲ್ಲಾಸ್ಪತ್ರೆಗೆ ಭೇಟಿ, ಡೆಂಗಿ ನಿಯಂತ್ರಣಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 14:20 IST
Last Updated 19 ಜೂನ್ 2024, 14:20 IST
ಚಿಕ್ಕಮಗಳೂರು ಜಿಲ್ಲಾಸ್ಪತ್ರಗೆ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು, ಶಾಸಕ ಎಚ್.ಡಿ.ತಮ್ಮಯ್ಯ, ಕೆ.ಎಸ್‌.ಆನಂದ್, ಟಿ.ಡಿ. ರಾಜೇಗೌಡ ಇದ್ದರು
ಚಿಕ್ಕಮಗಳೂರು ಜಿಲ್ಲಾಸ್ಪತ್ರಗೆ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು, ಶಾಸಕ ಎಚ್.ಡಿ.ತಮ್ಮಯ್ಯ, ಕೆ.ಎಸ್‌.ಆನಂದ್, ಟಿ.ಡಿ. ರಾಜೇಗೌಡ ಇದ್ದರು   

ಚಿಕ್ಕಮಗಳೂರು: ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಬುಧವಾರ ಭೇಟಿ ನೀಡಿ ಡೆಂಗಿ ಜ್ವರದಿಂದ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಯೋಗಕ್ಷೇಮ ವಿಚಾರಿಸಿದರು.

ಡೆಂಗಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಆಸ್ಪತ್ರೆಯ ವ್ಯವಸ್ಥೆಯನ್ನೂ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆಸ್ಪತ್ರೆ ವ್ಯವಸ್ಥೆ ಸುಧಾರಣೆ ಮಾಡಿ ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು ಅವರಿಗೆ ತಿಳಿಸಿದರು.

ADVERTISEMENT

ಆಸ್ಪತ್ರೆಯ ರೋಗಿಗಳು ಹಾಗೂ ಸಂಬಂಧಿಕರಿಗೆ ಧೈರ್ಯ ತುಂಬಿದರು. ಉತ್ತಮ ಚಿಕಿತ್ಸೆ, ಆರೈಕೆ ಭರವಸೆ ನೀಡಿದರು. ಡೆಂಗಿ ಜ್ವರದ ಬಗ್ಗೆ ಸಾರ್ವಜನಿಕ ಜಾಗೃತಿ ಅಭಿಯಾನ ನಡೆಸಿ ಅರಿವು ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು.

ಶಾಸಕರಾದ ಎಚ್.ಡಿ.ತಮ್ಮಯ್ಯ, ಕೆ.ಎಸ್.ಆನಂದ್, ಟಿ.ಡಿ.ರಾಜೇಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಮೋಹನ್‌ಕುಮಾರ್, ನಿಗಮದ ಅಧ್ಯಕ್ಷರಾದ ಕೆ.ಪಿ.ಅಂಶುಮಂತ್‌, ಬಿ.ಎಚ್‌.ಹರೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.