ADVERTISEMENT

ನರಸಿಂಹರಾಜಪುರ: ಲಾರ್ವ ನಾಶಕ ಮೀನು ಬಿಡುವ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 14:14 IST
Last Updated 9 ಜುಲೈ 2024, 14:14 IST
ನರಸಿಂಹರಾಜಪುರ ವ್ಯಾಪ್ತಿಯ ವಿವಿಧ ಕೆರೆಗಳಿಗೆ ಸೋಮವಾರ ಲಾರ್ವಹಾರಿ ಮೀನುಮರಿಗಳನ್ನು ಬಿಡುವ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಸದಸ್ಯ ಮುನಾವರ್ ಪಾಷ, ಡಾ.ವಿಜಯಕುಮಾರ್, ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್ ಭಾಗವಹಿಸಿದ್ದರು
ನರಸಿಂಹರಾಜಪುರ ವ್ಯಾಪ್ತಿಯ ವಿವಿಧ ಕೆರೆಗಳಿಗೆ ಸೋಮವಾರ ಲಾರ್ವಹಾರಿ ಮೀನುಮರಿಗಳನ್ನು ಬಿಡುವ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಸದಸ್ಯ ಮುನಾವರ್ ಪಾಷ, ಡಾ.ವಿಜಯಕುಮಾರ್, ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್ ಭಾಗವಹಿಸಿದ್ದರು   

ನರಸಿಂಹರಾಜಪುರ: ನಗರದಲ್ಲಿ ಡೆಂಗಿ ನಿಯಂತ್ರಣಕ್ಕೆ ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶುಕ್ರವಾರ ಲಾರ್ವ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಕೆ.ಎನ್. ವಿಜಯಕುಮಾರ್ ತಿಳಿಸಿದರು.

ಪಟ್ಟಣದ ವ್ಯಾಪ್ತಿಯ ವಿವಿಧ ಕೆರೆಗಳಿಗೆ ಸೋಮವಾರ ಪಟ್ಟಣ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳೊಂದಿಗೆ ಡೆಂಗಿ ಸೊಳ್ಳೆ ನಿಯಂತ್ರಣದ ಲಾರ್ವ ನಾಶಕ ಮೀನುಗಳನ್ನು ಬಿಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ಮನೆಮನೆಗೆ ಭೇಟಿ ನೀಡಿ ಜ್ವರ ಸಮೀಕ್ಷೆ ಮಾಡಿ, ಕರಪತ್ರ ವಿತರಿಸಿ, ಲಾರ್ವ ಗುರುತಿಸಿ ಅವುಗಳನ್ನು ನಾಶ ಮಾಡುವ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ‌ತಾಲ್ಲೂಕು ಆರೋಗ್ಯ ಅಧಿಕಾರಿ, ಹಿರಿಯ–ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಸಿಬ್ಬಂದಿ ತಂಡ ಲಕ್ಕವಳ್ಳಿ ಸಮೀಪದ ಬಿ.ಆರ್.ಪಿ ಕೆರೆ ಹಾಗೂ ಗಪ್ಪಿ ಗಾಂಭೋಸಿಯ ಸಾಕಾಣಿಕೆ ತೊಟ್ಟಿಯಿಂದ ಮೀನು ಮರಿಗಳನ್ನ ತಂದು ಕೆರೆಗಳಿಗೆ ಬಿಡುವಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು

ADVERTISEMENT

ಲಾರ್ವಹಾರಿ ಮೀನು ಮರಿ ಬಿಡುವ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್. ಶೆಟ್ಟಿ, ಟಿ. ಮುನಾವರ್ ಪಾಷಾ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್.ವಿ. ಮಂಜುನಾಥ್, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಎಲ್.ಎಂ. ದರ್ಶನಾಥ, ತಾಲ್ಲೂಕಿನ ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಪಿ. ಪವನ್ಕರ್, ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ಕೆ. ಭಗವಾನ್, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಅರ್. ಕೇಶವಮೂರ್ತಿ, ಜಿ.ನಾಗೇಂದ್ರಪ್ಪ, ಪಟ್ಟಣ ಪಂಚಾಯಿತಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಕುಮಾರ್, ವಾಟರ್ ಮೆನ್ ಸುರೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.