ನರಸಿಂಹರಾಜಪುರ: ಕಸ್ತೂರಿರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ಹೊರಡಿಸಲಾಗಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಸೆ. 30 ಕೊನೆಯ ದಿನ. ಎಲ್ಲ ಗ್ರಾಮ ಪಂಚಾಯಿತಿಗಳು ವಿಶೇಷ ಗ್ರಾಮ ಸಭೆ ನಡೆಸಿ ಆಕ್ಷೇಪಣೆ ಸಲ್ಲಿಸಬೇಕು ಎಂದು ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿಯ ಶೃಂಗೇರಿ ಕ್ಷೇತ್ರದ ಅಧ್ಯಕ್ಷ ಎಂ.ಎನ್.ನಾಗೇಶ್ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಆಗಸ್ಟ್ 17ರಂದು ಕೊಪ್ಪದಲ್ಲಿ ನಡೆದ ಪ್ರತಿಭಟನೆಯಲ್ಲಿ ನಿಗದಿತ ದಿನಾಂಕದೊಳಗೆ ಪ್ರಸ್ತಾಪಿತ ಗ್ರಾಮಗಳಿಂದ ಆಕ್ಷೇಪಣೆ ಸಲ್ಲಿಸುವ ಕಾರ್ಯವನ್ನು ಮಾಡುವುದಾಗಿ ತಿಳಿಸಲಾಗಿತ್ತು. ಶೃಂಗೇರಿ ಕ್ಷೇತ್ರದ 3 ತಾಲ್ಲೂಕುಗಳ ಗ್ರಾ. ಪಂ ಅಧ್ಯಕ್ಷರು, ಖಾಂಡ್ಯ ಹೋಬಳಿಯ ಗ್ರಾಮ ಪಂಚಾಯಿತಿಗಳಿಗೆ ಮಾಹಿತಿ ನೀಡಲಾಗಿದೆ. ಗ್ರಾಮ ಸಭೆಯೂ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಗ್ರಾಮಸ್ಥರ ವೈಯಕ್ತಿಕ ಆಕ್ಷೇಪಣೆಗೂ ಅರ್ಜಿ ತಯಾರಿಸಲಾಗಿದೆ. ಗಣಪತಿ ಸಮಿತಿಯವರನ್ನು ಸಂಪರ್ಕಿಸಿ ಜನಜಾಗೃತಿ ಮೂಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.