ADVERTISEMENT

ಪ್ರವಾಸಿ ತಾಣಗಳ ವೀಕ್ಷಣೆ: ಆನ್‍ಲೈನ್ ನೋಂದಣಿ ಕಡ್ಡಾಯಕ್ಕೆ ಪ್ರವಾಸಿಗರ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 14:10 IST
Last Updated 28 ಜೂನ್ 2024, 14:10 IST

ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗೆ ಆನ್‍ಲೈನ್ ನೊಂದಣಿ ಕಡ್ಡಾಯಗೊಳಿಸಲು ಮುಂದಾಗಿರುವ ಜಿಲ್ಲಾಡಳಿತದ ಕ್ರಮಕ್ಕೆ ಕರ್ನಾಟಕ ರಾಜ್ಯ ಹಜರತ್ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.

ಜಿಲ್ಲೆಯ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಬಾಬಾಬುಡನ್‍ಗಿರಿ, ಮಾಣಿಕ್ಯಧಾರ, ಗಾಳಿಕೆರೆ ಸೇರಿ ಹಲವು ಪ್ರವಾಸಿ ತಾಣಗಳನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಇದರಿಂದ ಸರ್ಕಾರಕ್ಕೆ ಲಕ್ಷಾಂತರ ಆದಾಯ ಸಂಗ್ರಹವಾಗುತ್ತಿದೆ. ಈ ನಡುವೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕಾದ ಜಿಲ್ಲಾಡಳಿತವು ಪ್ರವಾಸಿಗರಿಗೆ ಆನ್‌ಲೈನ್ ನೋಂದಣಿ ಕಡ್ಡಾಯ ಎಂಬ ನಿಯಮ ರೂಪಿಸಲು ಮುಂದಾಗಿರುವುದು ಅವೈಜ್ಞಾನಿಕವಾಗಿದೆ ಎಂದು ಖಂಡಿಸಿದ್ದಾರೆ.

ಇಂತಹ ಅವೈಜ್ಞಾನಿಕ ನಿಯಮದಿಂದ ಜೀವನೋಪಾಯಕ್ಕೆ ಸಣ್ಣ–ಪುಟ್ಟ ವ್ಯಾಪಾರ ಮಾಡುವ ಕುಟುಂಬಗಳು, ಟ್ಯಾಕ್ಸಿ ಚಾಲಕರಿಗೆ ತೊಂದರೆಯಾಗಲಿದೆ. ಲಾಡ್ಜ್‌ಗಳು, ರೆಸಾರ್ಟ್, ಹೋಂಸ್ಟೆಗಳಿಗೂ ಹೊಡೆತ ಬೀಳಲಿದೆ. ಪ್ರವಾಸಿಗರು ಹಾಗೂ ಸ್ಥಳೀಯರ ಹಿತದೃಷ್ಠಿಯಿಂದ ಪ್ರವಾಸಿಗರ ನೋಂದಣಿ ಎಂಬ ನಿರ್ಧಾರವನ್ನು ಜಿಲ್ಲಾಡಳಿತ ಕೈಬಿಡಬೇಕು ಎಂದು ವೇದಿಕೆ ಅಧ್ಯಕ್ಷ ಜಮ್‍ಷೀದ್ ಖಾನ್ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.