ADVERTISEMENT

ಕನ್ನಡ ಭಾಷೆ, ಸಂಸ್ಕೃತಿ ಬೆಳೆಸುವುದು ನಮ್ಮ ಗುರಿ: ಶಾಸಕ ಟಿ.ಡಿ ರಾಜೇಗೌಡ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2024, 13:24 IST
Last Updated 1 ನವೆಂಬರ್ 2024, 13:24 IST
ಶೃಂಗೇರಿಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಕನ್ನಡಾಂಬೆ ಭಾವಚಿತ್ರಕ್ಕೆ ಶಾಸಕ ಟಿ.ಡಿ ರಾಜೇಗೌಡ ಪುಷ್ಪ ನಮನ ಸಲ್ಲಿಸಿದರು
ಶೃಂಗೇರಿಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಕನ್ನಡಾಂಬೆ ಭಾವಚಿತ್ರಕ್ಕೆ ಶಾಸಕ ಟಿ.ಡಿ ರಾಜೇಗೌಡ ಪುಷ್ಪ ನಮನ ಸಲ್ಲಿಸಿದರು   

ಶೃಂಗೇರಿ: ‘ಇಂಗ್ಲಿಷ್‌ ಶ್ರೇಷ್ಠ ಎಂಬ ಮನೋಭಾವ ಬದಲಾಗಬೇಕು. ಮಾತೃ ಭಾಷೆಗೆ ಪ್ರಾಧಾನ್ಯತೆ ಲಭಿಸಬೇಕು. ಕಲೆ, ಸಾಹಿತ್ಯ, ಸಂಸ್ಕೃತಿಗೆ ಆದ್ಯತೆ ನೀಡಿರುವ ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನು ಉಳಿಸುವ ಹೊಣೆಗಾರಿಕೆ ಕನ್ನಡಿಗರ ಮೇಲಿದೆ’ ಎಂದು ಶಾಸಕ  ಟಿ.ಡಿ ರಾಜೇಗೌಡ ಹೇಳಿದರು.

ಶೃಂಗೇರಿ ತಾಲ್ಲೂಕಿನ ಕನ್ನಡ ಭವನದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್‌ನ ಎಚ್.ಎಸ್ ಸುಬ್ರಹ್ಮಣ್ಯ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಮಾತ್ರ ಕನ್ನಡ ಉಳಿದಿದೆ. ನಗರಗಳಲ್ಲಿ ಕನ್ನಡ ಭಾಷೆ ಅಭಿವೃದ್ಧಿಪಡಿಸಬೇಕು' ಎಂದರು.

ADVERTISEMENT

ಜನಾರ್ದನ ಮಂಡಗಾರು, ಕಿಗ್ಗಾ ಶ್ರೀನಿವಾಸ್‍ ಅವರನ್ನು ಗೌರವಿಸಲಾಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ 125ಕ್ಕೆ 125 ಅಂಕ  ಪಡೆದ  ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಲಾಯಿತು.

ತಹಶೀಲ್ದಾರ್ ಗೌರಮ್ಮ, ಇ.ಒ ಸುದೀಪ್, ಡಿಸಿಸಿ ಬ್ಯಾಂಕ್ ನೀರ್ದೆಶಕ ಡಿ.ಸಿ ಶಂಕರಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಚ್.ಎಸ್ ವೇಣುಗೋಪಾಲ್, ಸದಸ್ಯರಾದ ರಾಧಿಕಾ, ಶ್ರೀವಿದ್ಯಾ, ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಪೂಜಾರಿ, ಧರ್ಮಪ್ಪ ಗೌಡ, ಬೇಗಾನೆ ವಿವೇಕ್, ಜ್ಯೋತಿ ಮಂಜುನಾಥ್, ಆಶೀಶ್ ದೇವಾಡಿಗ, ದಯಾನಂದ್, ಕುರಿಯಕೋಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.