ತರೀಕೆರೆ: ‘ಪ್ಲಾಸ್ಟಿಕ್ ಮುತ್ತ ಪಟ್ಟಣವಾಗಿಸಲು ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ’ ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಶಾಂತ್ ಹೇಳಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶಾಲಾ ಮಕ್ಕಳೂಂದಿಗೆ ಆಯೋಜಿಸಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನದಲ್ಲಿ ಅವರು ಮಾತನಾಡಿದರು.
‘ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ. ಸರ್ಕಾರವು ಏಕ ಬಳಕೆ ಪ್ಲಾಸ್ಟಿಕ್ ನಿಷೇದಿಸಿದೆ ಪ್ಲಾಸ್ಟಿಕ್ ಮುಕ್ತ ಮಾಡುವಲ್ಲಿ ವಿದ್ಯಾರ್ಥಿಗಳ ಮತ್ತು ಪೌರಕಾರ್ಮಿಕ ಪಾತ್ರ ಮುಖ್ಯವಾಗಿದೆ’ ಎಂದರು.
ಪುರಸಭೆಯ ಪರಿಸರ ಎಂಜಿನಿಯರ್ ತಾಹೇರ ತಸ್ನೀಮ್ ಮಾತನಾಡಿ, ‘ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತ ಪಟ್ಟಣವಾಗಿಸಬೇಕು, ಇಲ್ಲವಾದರೆ ಮಾನವ ಕುಲಕ್ಕೆ, ಪ್ರಾಣಿ-ಪಕ್ಷಿಗಳಿಗೆ ಸಂಚಕಾರವಾಗಲಿದೆ’ ಎಂದರು.
ಪುರಸಭೆ ಉಪಾಧ್ಯಕ್ಷೆ ರಿಹಾನ ಫರ್ವೀನ್, ಪುರಸಭಾ ಸದಸ್ಯರಾದ ದಾದಾಪೀರ್, ಪಾರ್ವತಮ್ಮ, ಆರೋಗ್ಯ ನಿರೀಕ್ಷಕರಾದ ಮಹೇಶ್ವರಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.