ADVERTISEMENT

ಮೂಡಿಗೆರೆ ಪುರಸಭೆಗಾಗಿ ಸರ್ಕಾರಕ್ಕೆ ಪ್ರಸ್ತಾವ: ಶಾಸಕ ಎಂ.ಪಿ. ಕುಮಾರಸ್ವಾಮಿ

ಪಟ್ಟಣ ಪಂಚಾಯಿತಿ ಹಾಲಿ, ಮಾಜಿ ಸದಸ್ಯರಿಗೆ ಕಚೇರಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2021, 2:26 IST
Last Updated 28 ಡಿಸೆಂಬರ್ 2021, 2:26 IST
ಮೂಡಿಗೆರೆ ಪಟ್ಟಣದ ಬೇಲೂರು ರಸ್ತೆಯಲ್ಲಿ ಸೋಮವಾರ ಉದ್ಘಾಟನೆಗೊಂಡ ಪಟ್ಟಣ ಪಂಚಾಯಿತಿಯ ಹಾಲಿ ಹಾಗೂ ಮಾಜಿ ಸದಸ್ಯರ ಕಚೇರಿಯಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿದರು. ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಕೇಂದ್ರದ ಮಾಜಿ ಸಚಿವೆ ಡಿ.ಕೆ. ತಾರದೇವಿ ಸಿದ್ಧಾರ್ಥ ಇದ್ದರು.

ಮೂಡಿಗೆರೆ: ‘ಮೂಡಿಗೆರೆ ಪಟ್ಟಣಕ್ಕೆ ಹೊಂದಿಕೊಂಡಿರುವ ಕೆಲವು ಗ್ರಾಮಗಳನ್ನು ಪಟ್ಟಣ ಪಂಚಾಯಿತಿಗೆ ಸೇರ್ಪಡೆ ಮಾಡಿಕೊಂಡು ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮಾರ್ಪಡಿಸುವ ಪ್ರಸ್ತಾವ ಸರ್ಕಾರದ ಮುಂದಿದೆ’ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ತಿಳಿಸಿದರು.

ಪಟ್ಟಣದ ಬೇಲೂರು ರಸ್ತೆಯಲ್ಲಿ ಸೋಮವಾರ ಪಟ್ಟಣ ಪಂಚಾಯಿತಿಯ ಹಾಲಿ ಹಾಗೂ ಮಾಜಿ ಸದಸ್ಯರಿಗೆ ನೂತನ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಮಾತನಾಡಿ, ‘ಜನರ ಸೇವೆ ಮಾಡಲು ಕಚೇರಿ ಸ್ಥಾಪಿಸಿರುವುದು ಉತ್ತಮ ಬೆಳವಣಿಗೆ. ಇದರಿಂದ ಜನರಿಗೆ ಅನುಕೂಲವಾಗುತ್ತದೆ’ ಎಂದು ಹೇಳಿದರು.

ADVERTISEMENT

ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ.ಬಿ. ಧರ್ಮಪಾಲ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಕೆ.ಸುಧೀರ್, ಕೇಂದ್ರದ ಮಾಜಿ ಸಚಿವೆ ಡಿ.ಕೆ. ತಾರಾದೇವಿ ಸಿದ್ದಾರ್ಥ ಹಾಗೂ ಪಟ್ಟಣ ಪಂಚಾಯಿತಿಯ ಸದಸ್ಯರು ಹಾಗೂ ಮಾಜಿ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.