ಕಟ್ಟಿನಮನೆ (ಎನ್.ಆರ್.ಪುರ): ಕಟ್ಟಿನಮನೆಯಲ್ಲಿ ₹ 20 ಲಕ್ಷ ವೆಚ್ಚದಲ್ಲಿ ನಿರ್ಮಿಸುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.
‘ಕೋವಿಡ್ ಸಂಕಷ್ಟ ಕಾಲದ ಎರಡು ವರ್ಷದಲ್ಲಿ ಬಡವರ ಸಂಕಷ್ಟಕ್ಕೆ ನೆರವು ನೀಡಲು ವೈಯಕ್ತಿಕವಾಗಿ ₹ 1 ಕೋಟಿ ವೆಚ್ಚ ಮಾಡಿ ಕಷ್ಟಕ್ಕೆ ಸ್ಪಂದಿಸಲಾಗಿದೆ’ ಎಂದು ಶಂಕುಸ್ಥಾಪನೆ ಮಾಡಿದ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
‘ಕೊಪ್ಪ, ನರಸಿಂಹರಾಜಪುರ ಹಾಗೂ ಶೃಂಗೇರಿ ಸರ್ಕಾರಿ ಆಸ್ಪತ್ರೆಗಳಿಗೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಆಮ್ಲಜನಕ ಉತ್ಪಾದನಾ ಘಟಕ, ಐಸಿಯು ಕೇಂದ್ರ ಆರಂಭವಾಗಿದೆ. ಕಾಯ್ದಿರಿಸಲಾಗಿದೆ. 110 ಜಂಬೊ ಸಿಲಿಂಡರ್ ಇದೆ’ ಎಂದರು.
ಕಾನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೋಹಿನಿ ಹಾಗೂ ಕಾನೂರು ವಿಎಸ್ಎಸ್‌ಎನ್ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವೈ.ಲಲಿತಾ, ಕಟ್ಟಿನಮನೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿನಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರತ್ನಾಕರ, ಸದಸ್ಯರಾದ ಶಿವಮೂರ್ತಿ, ಜಯಲಕ್ಷ್ಮೀ, ವಿಶಾಂತಿ ಡಿ.ಸೋಜ, ವಿಜಯಕುಮಾರ್, ನಾಗರತ್ನ, ನಯನ, ಮನೋಹರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಸಿ.ನಾಗೇಶ್, ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ನಟರಾಜ್, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.