ADVERTISEMENT

ಮೂಡಿಗೆರೆ ತಾಲ್ಲೂಕಿನಾದ್ಯಂತ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2024, 14:05 IST
Last Updated 8 ಜೂನ್ 2024, 14:05 IST
ಮೂಡಿಗೆರೆ ತಾಲ್ಲೂಕಿನ ಜಾಣಿಗೆ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಭತ್ತದ ಸಸಿಮಡಿ ನಿರ್ಮಾಣದಲ್ಲಿ ತೊಡಗಿದ್ದ ರೈತರು ಅಗಡಿಗೆ ಭತ್ತ ಹಾಕುತ್ತಿದ್ದ ದೃಶ್ಯ ಕಂಡು ಬಂತು
ಮೂಡಿಗೆರೆ ತಾಲ್ಲೂಕಿನ ಜಾಣಿಗೆ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಭತ್ತದ ಸಸಿಮಡಿ ನಿರ್ಮಾಣದಲ್ಲಿ ತೊಡಗಿದ್ದ ರೈತರು ಅಗಡಿಗೆ ಭತ್ತ ಹಾಕುತ್ತಿದ್ದ ದೃಶ್ಯ ಕಂಡು ಬಂತು   

ಮೂಡಿಗೆರೆ: ತಾಲ್ಲೂಕಿನಾದ್ಯಂತ ಶನಿವಾರ ಉತ್ತಮ ಮಳೆ‌ಯಾಯಿತು. ಮಧ್ಯಾಹ್ನ 12ರಿಂದ ಆರಂಭವಾದ ಮಳೆ ಸಂಜೆಯವರೆಗೂ ಧಾರಾಕಾರವಾಗಿ ಸುರಿಯಿತು.

ಶನಿವಾರ ಸುರಿದ ಮಳೆಗೆ ಹೇಮಾವತಿ, ಜಪಾವತಿ, ಚಿಕ್ಕಳ್ಳ, ದೊಡ್ಡಳ್ಳ, ಹುಳುಗಿಹಳ್ಳಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿತ್ತು. ತಾಲ್ಲೂಕಿನಾದ್ಯಂತ ಮಳೆಯಾಗುತ್ತಿರುವುದರಿಂದ ಎಲ್ಲೆಡೆ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ.

ಕೊಟ್ಟಿಗೆಹಾರ ಸುತ್ತಮುತ್ತ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು ಸುತ್ತಮುತ್ತ ಶುಕ್ರವಾರ ತಡರಾತ್ರಿಯಿಂದ ಬೆಳಿಗ್ಗೆವರೆಗೂ ಉತ್ತಮ ಮಳೆಯಾಗಿದೆ.

ADVERTISEMENT

ರೈತರು ಗದ್ದೆಯಲ್ಲಿ ಉಳುಮೆ ಮಾಡಲು ಆರಂಭಿಸಿದ್ದು, ಇನ್ನೂ ಕೆಲವೆಡೆ ಭತ್ತದ ಸಸಿಮಡಿ ಹಾಕಲು ತಯಾರಿ ನಡೆಸಿದ್ದಾರೆ. ಕಾಫಿ ತೋಟಗಳಿಗೆ ಗೊಬ್ಬರ ಹಾಕುವ ದೃಶ್ಯ ಅಲ್ಲಲ್ಲಿ ಕಂಡುಬಂತು. ಕೊಟ್ಟಿಗೆಹಾರ ಭಾಗದಲ್ಲಿ ಶನಿವಾರ ಒಂದೂವರೆ ಇಂಚಿಗೂ ಅಧಿಕ ಮಳೆಯಾಗಿದೆ. ಚಾರ್ಮಾಡಿ ಘಾಟ್‌ನಲ್ಲಿ ಮಂಜು ಕವಿದ ವಾತಾವರಣವಿದ್ದು ಉತ್ತಮ ಮಳೆಯಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.