ADVERTISEMENT

ಮೂಡಿಗೆರೆ ಸುತ್ತಮುತ್ತ ಗಾಳಿ ಸಹಿತ ಮಳೆ

​ಪ್ರಜಾವಾಣಿ ವಾರ್ತೆ
Published 8 ಮೇ 2024, 14:08 IST
Last Updated 8 ಮೇ 2024, 14:08 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಮೂಡಿಗೆರೆ: ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಗಾಳಿ ಸಹಿತ ಮಳೆ‌ ಸುರಿಯಿತು.

ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಇತ್ತು. ಸಂಜೆ 5.30ರ ಸುಮಾರಿಗೆ ಪ್ರಾರಂಭವಾದ ಮಳೆ ಅರ್ಧ ಗಂಟೆ ಧಾರಾಕಾರವಾಗಿ ಸುರಿಯಿತು. ಗಂಗನಮಕ್ಕಿ,‌ ಬಿದರಹಳ್ಳಿ ಪ್ರದೇಶಗಳಲ್ಲಿ ಚರಂಡಿ ಇಲ್ಲದ್ದರಿಂದ ಮಳೆನೀರು ಹೆದ್ದಾರಿಯಲ್ಲಿ ಹರಿಯಿತು. ಇದರಿಂದ ವಾಹನ ಸವಾರರು ಪರದಾಡಿದರು.

ADVERTISEMENT

ಮಳೆಯೊಂದಿಗೆ ಗಾಳಿ ಬೀಸಿದ್ದರಿಂದ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಪಟ್ಟಣ ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಿತ್ತು. ಗಾಳಿಯಿಂದಾಗಿ ಕಾಫಿ ತೋಟಗಳಲ್ಲಿ ಮರಗಳು ಧರೆಗುರುಳಿದ್ದರಿಂದ ಕಾಫಿ ಗಿಡಗಳು ಮುರಿದು ಬಿದ್ದವು. ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಸಾಧಾರಣ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.