ADVERTISEMENT

ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ ಚಿಕ್ಕಮಗಳೂರು ರಾಜ್ಯಕ್ಕೆ ಪ್ರಥಮ

ಸಕಾಲ ಯೋಜನೆಯಡಿ ಅರ್ಜಿಗಳ ವಿಲೇವಾರಿ: ಸಚಿವ ಸುರೇಶ್‌

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2021, 2:38 IST
Last Updated 26 ಫೆಬ್ರುವರಿ 2021, 2:38 IST
ಚಿಕ್ಕಮಗಳೂರಿನಲ್ಲಿ ಜಿಲ್ಲಾಧಿಕಾರಿ ರಮೇಶ್ ಅವರು ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ್ದರು.
ಚಿಕ್ಕಮಗಳೂರಿನಲ್ಲಿ ಜಿಲ್ಲಾಧಿಕಾರಿ ರಮೇಶ್ ಅವರು ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ್ದರು.   

ಚಿಕ್ಕಮಗಳೂರು: ‘ಸಕಾಲ ಯೋಜನೆ ಯಡಿ ಅರ್ಜಿ ವಿಲೇವಾರಿಯಲ್ಲಿ ಚಿಕ್ಕಮಗ ಳೂರು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಸಕಾಲ ಸಚಿವ ಎಸ್.ಸುರೇಶ್ ಕುಮಾರ್‌ ಹೇಳಿದರು.

ಬೆಂಗಳೂರಿನ ವಿಕಾಸ ಸೌಧದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾಧಿಕಾರಿ ಗಳೊಂದಿಗಿನ ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದರು.

‘2021ರ ಜನವರಿಯಲ್ಲಿ ಸಕಾಲ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ 67,093 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 57,861 ಅರ್ಜಿ ವಿಲೇವಾರಿ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಎರಡು, ಶಿವಮೊಗ್ಗ ಮೂರು, ಬೆಂಗಳೂರು ಕೊನೆಯ ಸ್ಥಾನದಲ್ಲಿವೆ. ತಾಲ್ಲೂಕುವಾರಿನಲ್ಲಿ ಬೆಂಗಳೂರು ದಕ್ಷಿಣ ಮೊದಲ ಸ್ಥಾನದಲ್ಲಿದೆ’ ಎಂದು ಹೇಳಿದರು.

ADVERTISEMENT

‘2021ರ ಜನವರಿಯಲ್ಲಿ ರಾಜ್ಯದಾದ್ಯಂತ ಸಕಾಲ ಯೋಜನೆಯಡಿ 27.45 ಲಕ್ಷ ಅರ್ಜಿ ಸಲ್ಲಿಕೆಯಾಗಿವೆ. ಈ ಪೈಕಿ 22.88 ಲಕ್ಷ ಅರ್ಜಿ ವಿಲೇವಾರಿಯಾಗಿವೆ. ಎಲ್ಲ ಜಿಲ್ಲೆಗಳಲ್ಲಿ ಸಕಾಲ ಸಪ್ತಾಹ ಕಡ್ಡಾಯವಾಗಿ ನಡೆಸಲು ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು. ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಪ್ರತಿ ಸೋಮವಾರ ಸಕಾಲ ಯೋಜನೆ ಪ್ರಗತಿ ಪರಿಶೀಲನೆ ನಡೆಸಬೇಕು. ಕಚೇರಿಗಳ ಮುಂದೆ ಸಕಾಲ ಯೋಜನೆಯ ಮಾಹಿತಿ ಫಲಕ ಹಾಕಬೇಕು’ ಎಂದು ಹೇಳಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ರವಿಕುಮಾರ್, ಹೆಚ್ಚುವರಿ ಕಾರ್ಯದರ್ಶಿ ರಾಜೀವ್‌ಚಾವ್ಲಾ, ಸಕಾಲ ಮಿಷನ್ ನಿರ್ದೇಶಕಿ ಬಿ.ಆರ್.ಮಮತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.