ತರೀಕೆರೆ: ‘ಸಮಾಜದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಗ್ರಾಮದ ಸಂಸ್ಕೃತಿ ಉಳಿಸಲು ಸಾಧ್ಯ’ ಎಂದು ಸಾಣೆಹಳ್ಳಿ ಮಠದ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
ಸಮೀಪದ ನೆರಲಕೆರೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿ ಗಿರಿಜಾ ಕಲ್ಯಾಣ ಮತ್ತು ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜನರಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರದ ಬಗ್ಗೆ ಅರಿವು, ಧಾರ್ಮಿಕ ಭಾವನೆ ಮೂಡಿಸಲು ಗ್ರಾಮೀಣಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಹಿಳೆಯರ ಸಬಲೀಕರಣ, ಸ್ವಯಂ ಉದ್ಯೋಗ ಮಾಡಲು ಸಹಾಯ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಹಾರಿಕ ಮಂಜುನಾಥ ಮಾತನಾಡಿ, ‘ಹೆಣ್ಣು ತವರು ಮನೆಯಲ್ಲಿ ಉತ್ತಮ ಸಂಸ್ಕಾರ ಪಡೆದು ಸಮಾಜಕ್ಕೆ ಮಾದರಿಯಾಗಬೇಕು’ ಎಂದರು.
ಯೋಜನೆಯ ಪ್ರಾದೇಶಿಕ ವಿಭಾಗದ ನಿರ್ದೇಶಕಿ ಗೀತಾ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಗ್ರಾಮಾಣಾಭಿವೃದ್ಧಿ ಜಿಲ್ಲಾ ನಿರ್ದೇಶಕ ಪ್ರಕಾಶ್ ರಾವ್, ಯೋಜನಾಧಿಕಾರಿ ಕುಸುಮಾಧರ್, ಮೇಲ್ವಿಚಾರಕಿ ಜ್ಯೋತಿ ಗಣೇಶ್, ಬಸವರಾಜ್, ದಿನೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.