ನರಸಿಂಹರಾಜಪುರ: ‘ವೃತ್ತಿಯಲ್ಲಿ ಯಶಸ್ಸು ಪಡೆಯಲು ವೃತ್ತಿಪರ ಕೌಶಲ ಅವಶ್ಯಕ’ ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಸೈಯದ್ ನಿಜಾಮುದ್ದೀನ್ ಹೇಳಿದರು.
ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಈಚೆಗೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ವೃತ್ತಿ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಕೈಗಾರಿಕಾ ತರಬೇತಿ ಕೇಂದ್ರ ಬೆಳೆಯುತ್ತಿರುವುದು ಸಂತಸದ ವಿಷಯ ಎಂದರು.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿ ಕೆ.ಎನ್. ತಿಮ್ಮಪ್ಪ ಮಾತನಾಡಿ, ‘2018ರಲ್ಲಿ ಕೇವಲ ಐದು ತರಬೇತಿದಾರರಿಂದ ಸಂಸ್ಥೆ ಪ್ರಾರಂಭಗೊಂಡು ಇಂದು ಉತ್ತಮ ಮಟ್ಟದಲ್ಲಿ ಬೆಳವಣಿಗೆಯನ್ನು ಹೊಂದುತ್ತಿದೆ. ಶೇ 100 ಫಲಿತಾಂಶ ಪಡೆದಿದೆ’ ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ಮಾತನಾಡಿದರು.
ತಾಲ್ಲೂಕು ಕಾರ್ಯಕ್ರಮ ನಿರ್ವಾಹಕ ಎಂ.ಸುಬ್ರಹ್ಮಣ್ಯ ಮಾತನಾಡಿ, ತಾಲ್ಲೂಕಿನ ಎಲ್ಲ ಹಳ್ಳಿಗಳಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.
ಸರ್ಕಾರಿ ಕೈಗಾರಿಕಾ ಸಂಸ್ಥೆಯ ಪ್ರಾಂಶುಪಾಲ ಮಹಮ್ಮದ್ ರಹಮತ್ ಉಲ್ಲಾ ಅಧ್ಯಕ್ಷತೆ ವಹಿಸಿದ್ದರು. ಕೃಷ್ಣಯ್ಯ, ನಾಗವೇಣಿ, ರಾಕೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.