ADVERTISEMENT

ಪರಿಣಾಮಕಾರಿ ಬೋಧನೆಗೆ ಸ್ಮಾರ್ಟ್‌ ಟಿ.ವಿ.ಸಹಕಾರಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2023, 13:14 IST
Last Updated 21 ಸೆಪ್ಟೆಂಬರ್ 2023, 13:14 IST
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ ಅಗಸ್ತ್ಯ ಇಂಟರ್ ನ್ಯಾಷನಲ್ ಫೌಂಡೇಷನ್ ವತಿಯಿಂದ ತರೀಕೆರೆ ಮತ್ತು ಅಜ್ಜಂಪುರ ಸರ್ಕಾರಿ ಶಾಲೆಗಳಿಗೆ 50 ಸ್ಮಾರ್ಟ ಟಿ.ವಿಗಳನ್ನು ವಿತರಿಸಲಾಯಿತು.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ ಅಗಸ್ತ್ಯ ಇಂಟರ್ ನ್ಯಾಷನಲ್ ಫೌಂಡೇಷನ್ ವತಿಯಿಂದ ತರೀಕೆರೆ ಮತ್ತು ಅಜ್ಜಂಪುರ ಸರ್ಕಾರಿ ಶಾಲೆಗಳಿಗೆ 50 ಸ್ಮಾರ್ಟ ಟಿ.ವಿಗಳನ್ನು ವಿತರಿಸಲಾಯಿತು.   

ತರೀಕೆರೆ: ‘ತಂತ್ರಜ್ಞಾನ ಮತ್ತು ಮಾಹಿತಿ ಯುಗದಲ್ಲಿ ತರಗತಿಯಲ್ಲಿ ಪರಿಣಾಮಕಾರಿಯಾಗಿ ಬೋಧಿಸಲು ಸ್ಮಾರ್ಟ ಟಿ.ವಿ.ಸಹಕಾರಿಯಾಗಲಿದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಗೀತಾಶಂಕರ್ ಹೇಳಿದರು.

ಬೆಂಗಳೂರಿನ ಅಗಸ್ತ್ಯ ಇಂಟರ್ ನ್ಯಾಷಿನಲ್ ಫೌಂಡೇಷನ್ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ತರೀಕೆರೆ ಮತ್ತು ಅಜ್ಜಂಪುರದ ತಾಲ್ಲೂಕಿನ ಸರ್ಕಾರಿ ಶಾಲೆಗಳಿಗೆ ಉಚಿತ ಸ್ಮಾರ್ಟ ಟಿ.ವಿ ವಿತರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಶಿಕ್ಷಕರು ಆನ್‌ಲೈನ್ ಮೂಲಕ ಪಠ್ಯ ಬೋಧಿಸುವುದರಿಂದ ಶೈಕ್ಷಣಿಕ ಗುಣಮಟ್ಟ ಹೆಚ್ಚಾಗುತ್ತದೆ.ಆನ್‌ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳು ಕಲಿಕೆಗೆ ಪೂರಕ ಮಾಹಿತಿಯನ್ನು ಗ್ರಹಿಸಬಹುದು ಇದು ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ’ ಎಂದರು.

ADVERTISEMENT

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಟಿ.ಎಸ್.ಗಣೇಶ ಮಾತನಾಡಿ, ‘ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ನೀಡಲು ಸ್ಮಾರ್ಟ ಟಿ.ವಿ ಉತ್ತಮ ಉಪಕರಣವಾಗಿದೆ’ ಎಂದರು.

ಅಗಸ್ತ್ಯ ಇಂಟರ್ ನ್ಯಾಷನಲ್ ಫೌಂಡೇಷನ್ ವ್ಯಸ್ಥಾಪಕ ಮಂಜುನಾಥ ಮಾತನಾಡಿದರು. ಶಿಕ್ಷಣಾಧಿಕಾರಿ ಗೋವಿಂದಪ್ಪ,ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಉಮೇಶ್ ಶಿಕ್ಷಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.