ತರೀಕೆರೆ: ಲೋಕಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿರುವುದು ಕೆಲವು ಮಾಧ್ಯಮಗಳ ಮೋದಿ ಪರ ಪ್ರಚಾರದಿಂದ ಹೊರತು, ಬೇರೆ ಯಾರಿಂದಲೂ ಅಲ್ಲ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.
ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ನಡೆದ ತರೀಕೆರೆ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕರ್ತರು ಪ್ರಾಮಾಣಿಕವಾಗಿ ದುಡಿದಿದ್ದಾರೆ. ಕಣ್ಣಿಗೆ ಕಾಣದ ಮತದಾರರು ಬಿಜೆಪಿ ಗೆಲುವಿಗೆ ಕಾರಣರಾಗಿದ್ದಾರೆ. ಮುಂದಿನ ದಿನಗಳಲ್ಲಿ ಬ್ಲಾಕ್ ಅಧ್ಯಕ್ಷರು, ಹೋಬಳಿ ಅಧ್ಯಕ್ಷರ ಮುಖಾಂತರ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದರು.
ಕಾಡಾ ಅಧ್ಯಕ್ಷ ಡಾ. ಅಂಶುಮತ್ ಮಾತನಾಡಿ, ‘ಕಳೆದ ಲೋಕಸಭಾ ಚುನಾವಣೆಯ ಸೋಲಿನಿಂದ ಕಾರ್ಯಕರ್ತರು ದೃತಿಗೆಡಬೇಕಾಗಿಲ್ಲ. ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಮಾಡಬೇಕು’ ಎಂದರು.
ಕೆಪಿಸಿಸಿ ಸದಸ್ಯ ಎಚ್. ವಿಶ್ವನಾಥ್, ನಗರ ಅಧ್ಯಕ್ಷ ಪ್ರಕಾಶ್ ವರ್ಮಾ, ಮುಖಂಡರಾದ ಟಿ.ಎಸ್. ಧರ್ಮರಾಜ, ಬೈಟು ರಮೇಶ್, ಅಣ್ಣಯ್ಯ, ಜಗದೀಶ್, ದರ್ಶನ್, ರವಿ ಕಿಶೋರ್, ಮಿರ್ಜಾ ಇಸ್ಮಾಯಿಲ್, ಅಬೂಬಕರ್, ರಮೇಶ್, ಹೇಮಣ್ಣ ಮಾತನಾಡಿದರು.
ಬ್ಲಾಕ್ ಅಧ್ಯಕ್ಷ ಎಚ್.ಯು. ಫಾರೂಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಲಾಡ್ ಸ್ವಾಗತಿಸಿ, ನಿರೂಪಿಸಿದರು.
ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಯಾನಂದ, ಪ್ರಚಾರ ಸಮಿತಿ ಅಧ್ಯಕ್ಷ ಪರಶುರಾಮ ಸಮಿವುಲ್ಲಾ ಷರೀಫ್, ಮಹಿಳಾ ಅಧ್ಯಕ್ಷೆ ಭಾಗ್ಯಲಕ್ಷ್ಮಿ, ಹೇಮಲತಾ, ಪುರಸಭಾ ಸದಸ್ಯರಾದ ಗಿರಿಜಾ ವರ್ಮಾ, ಲೋಕೇಶ್, ಕುಮಾರ್, ಬಸವರಾಜ್, ರಂಗನಾಥ್, ಪರಮೇಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.