ಚಿಕ್ಕಮಗಳೂರು: ಸಾಲು-ಸಾಲು ರಜೆ ಇರುವುದರಿಂದ, ಕಾಫಿನಾಡು ಚಿಕ್ಕಮಗಳೂರಿಗೆ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ. ಮುಳ್ಳಯ್ಯನಗಿರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿ ಪ್ರವಾಸಿಗರು ಪರದಾಡುತ್ತಿದ್ದಾರೆ.
ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬಕ್ಕೆ ನಾಲ್ಕು ದಿನ ರಜೆ ಸಿಕ್ಕಿದ್ದು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಹಾಸನದಲ್ಲಿ ಹಾಸನಾಂಬೆ ದರ್ಶನಕ್ಕೆ ಬಂದವರು ಚಿಕ್ಕಮಗಳೂರು ಕಡೆಗೆ ಬರುತ್ತಿದ್ದಾರೆ. ಬಿಂಡಿಗ ದೇವೀರಮ್ಮ ದೇವಿ ದರ್ಶನ ಪಡೆದವರೂ ಮುಳ್ಳಯ್ಯನಗಿರಿ ಸೇರಿ ಇತರ ಪ್ರವಾಸಿ ತಾಣಗಳಿಗೂ ಭೇಟಿ ನೀಡುತ್ತಿದ್ದಾರೆ.
ಮುಳ್ಳಯ್ಯನಗಿರಿ ತುದಿಯಲ್ಲಿ ಶುಕ್ರವಾರ ಬೆಳಿಗ್ಗೆ ಕಾರುಗಳು ಸಾಲುಗಟ್ಟಿ ನಿಂತು, ವಾಪಸ್ ಬರಲು ಸಾಧ್ಯವಾಗದೆ ಪರದಾಡಿದರು.
ದಟ್ಟಣೆ ನಿಯಂತ್ರಿಸಲು ಪೊಲೀಸರು, ಸ್ಥಳೀಯರು ಹರಸಾಹಸ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.