ಹೊಸದುರ್ಗ: ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವೆಡೆ ಗುಡುಗು ಸಹಿತ ಹದ ಮಳೆಯಾಗಿದೆ. 40 ನಿಮಿಷಗಳ ಕಾಲ ಒಂದೇ ಸಮನೆ ಮಳೆ ಸುರಿದಿದೆ.
ಈಗಾಗಲೇ ಬಿತ್ತನೆ ಆರಂಭಿಸಿದ್ದ ರೈತರ ಮೊಗದಲ್ಲಿ ಸಂತಸ ಮೂಡಿದೆ. ಸಾವೆ, ಹೆಸರು, ಶೇಂಗಾ ಹಾಗೂ ಈರುಳ್ಳಿ ಸೇರಿದಂತೆ ಹಲವು ಬೆಳೆಗಳ ಬಿತ್ತನೆ ಕಾರ್ಯ ಬಿರುಸಿನಿಂದ ಸಾಗಿತ್ತು. ಮಳೆಯಾಗಿರುವುದರಿಂದ ಸಸಿ ಚಿಗುರೊಡೆಯಲು ಸಹಾಯವಾಗಿದೆ.
ತೆಂಗು ಹಾಗೂ ಅಡಿಕೆ ತೋಟಗಳು ಒಣಗುತ್ತಿದ್ದವು. ಸತತ ಮಳೆಯಿಂದಾಗಿ ತೋಟಗಳು ಸ್ವಲ್ಪ ಚೇತರಿಸಿಕೊಳ್ಳುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.