ADVERTISEMENT

ಸಾಮರ್ಥ್ಯವಿರುವಷ್ಟು ಜಾಗಕ್ಕೆ ಬೇಲಿ ಹಾಕಿಕೊಳ್ಳಲು ಹೇಳಿದ್ದೆ: ಎಚ್‌.ಆಂಜನೇಯ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2024, 19:09 IST
Last Updated 10 ಫೆಬ್ರುವರಿ 2024, 19:09 IST
ಎಚ್‌.ಆಂಜನೇಯ
ಎಚ್‌.ಆಂಜನೇಯ   

ಚಿತ್ರದುರ್ಗ: ‘ಮಠದ ಸುತ್ತ ನಿಮ್ಮ ಸಾಮರ್ಥ್ಯ ಇರುವಷ್ಟು ಜಾಗಕ್ಕೆ ಬೇಲಿ ಹಾಕಿಕೊಳ್ಳಿ. ಜಿಲ್ಲಾಧಿಕಾರಿ, ತಹಶೀಲ್ದಾರ್‌ ಸೇರಿ ಯಾರೊಬ್ಬರೂ ಬರುವುದಿಲ್ಲ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಬಹಿರಂಗ ಸಭೆಯಲ್ಲಿ ಹೇಳಿದ್ದೆ’ ಎಂದು ಮಾಜಿ ಸಚಿವ ಎಚ್‌.ಆಂಜನೇಯ ನೆನಪಿಸಿಕೊಂಡರು.

ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಗೊಲ್ಲಗಿರಿಯ ಮಠದ ಆವರಣದಲ್ಲಿ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಅವರಿಗೆ ಶನಿವಾರ ಹಮ್ಮಿಕೊಂಡಿದ್ದ ಗುರುವಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರ ಮತ್ತು ಮಠ ಬೇರೆಯಲ್ಲ. ಸರ್ಕಾರ ಮಾಡಲಾಗದ ಕಾರ್ಯಗಳನ್ನು ಮಠಗಳು ಮಾಡುತ್ತಿವೆ. ಸಮಾಜ ಕಟ್ಟುವ, ಶಿಕ್ಷಣ ನೀಡುವ ಹಾಗೂ ಸದ್ಭಾವನೆಯ ಸಮಾಜ ನಿರ್ಮಾಣ ಕಾರ್ಯವನ್ನು ಮಠಗಳು ಮಾಡುತ್ತಿವೆ. ಈ ವಿಶಾಲ ಜಾಗಕ್ಕೆ ಬೇಲಿ ಹಾಕಿಕೊಳ್ಳಿ ಎಂದು ಹೇಳಿದ್ದೆ ಅಲ್ಲವೇ’ ಎಂದು ವೇದಿಕೆಯಲ್ಲಿದ್ದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಅವರಿಗೆ ನೆನಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.