ಹೊಳಲ್ಕೆರೆ: ಬಿಜೆಪಿ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ದೂರಿದರು.
ಭಾರತ್ ಜೋಡೋ ಕಾರ್ಯಕ್ರಮದ ಅಂಗವಾಗಿ ಪಟ್ಟಣದಲ್ಲಿ ನಡೆದ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಬಿಜೆಪಿ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಸಮಾಜದಲ್ಲಿ ಜಾತಿ, ಧರ್ಮದ ವಿಷ ಬೀಜ ಬಿತ್ತಲಾಗುತ್ತಿದೆ. ಈ ಬಗ್ಗೆ ಯುವ ಪೀಳಿಗೆ ಜಾಗೃತಿ ವಹಿಸಬೇಕು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು, ವಿದೇಶದಿಂದ ಕಪ್ಪು ಹಣ ವಾಪಾಸ್ ತರಲಾಗುವುದು ಎಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಸರ್ಕಾರಿ ಸಂಸ್ಥೆಗಳನ್ನು ಮಾರಾಟ ಮಾಡಿ, ನಿರುದ್ಯೋಗ ಹೆಚ್ಚುವಂತೆ ಮಾಡಿದ್ದಾರೆ. ಜನ ವಿರೋಧಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಎಲ್ಲೆಡೆ ಜನಾಕ್ರೋಶ ವ್ಯಕ್ತವಾಗುತ್ತಿದೆ’ ಎಂದರು.
ದೇಶಕ್ಕಾಗಿ ಕಾಂಗ್ರೆಸ್ ನೇತಾರರು ತ್ಯಾಗ, ಬಲಿದಾನ ಮಾಡಿದ್ದಾರೆ. ಆದರೆ ಬಿಜೆಪಿ ಇತಿಹಾಸ ತಿರುಚುವ ಕೆಲಸಕ್ಕೆ ಕೈ ಹಾಕಿದೆ ಎಂದುಎಐಸಿಸಿ ಯುವ ಘಟಕದ ಕಾರ್ಯದರ್ಶಿ ಏಜಾಸ್ ಅಹ್ಮದ್ ಖಾನ್ ಆರೋಪಿಸಿದರು.
ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂಧ್ಯಾ ಪವಿತ್ರಾ, ಕಾಟೀಹಳ್ಳಿ ಶಿವಣ್ಣ, ಮಾಜಿ ಉಪಾಧ್ಯಕ್ಷ ಮಾಯಣ್ಣ, ಬಿ.ಗಂಗಾಧರ್, ಲೋಹಿತ್ ಕುಮಾರ್, ಅಜ್ಜಪ್ಪ, ಲೋಕೇಶ್ ನಾಯ್ಕ್, ರಂಜಿತ್ ಶ್ರೀನಿವಾಸ್, ನಾಗಭೂಷಣ್ ರೆಡ್ಡಿ, ಕಾರೇಹಳ್ಳಿ ಉಲ್ಲಾಸ್, ವಾಸೀಂ, ಮಧು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.